ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಚ್ಚರಿ ಆಗಿದೆ, ಭ್ರಮನಿರಸನ ಇಲ್ಲ, ಹೈಕೋರ್ಟಿಗೆ ಹೋಗುವೆ: ಸ್ವಾಮಿ

Last Updated 4 ಫೆಬ್ರುವರಿ 2012, 9:45 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್ಎಸ್): ವಿಚಾರಣಾ ನ್ಯಾಯಾಲಯದ ತೀರ್ಪು ಅಚ್ಚರಿ ತಂದಿದೆ. ಆದರೆ ಭ್ರಮನಿರಸನವಾಗಿಲ್ಲ. 2ಜಿ ತರಂಗಾಂತರ ಹಂಚಿಕೆ ಪ್ರಕರಣದಲ್ಲಿ ಚಿದಂಬರಂ ಅವರನ್ನು ಸಹ ಆರೋಪಿಯನ್ನಾಗಿ ಮಾಡಬೇಕೆಂಬ ತಮ್ಮ ಕೋರಿಕೆಯನ್ನು ವಜಾ ಮಾಡಿದ ವಿಚಾರಣಾ ನ್ಯಾಯಾಲಯದ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಜನತಾ ಪಕ್ಷದ ಅಧ್ಯಕ್ಷ ಸುಬ್ರಮಣಿಯನ್ ಸ್ವಾಮಿ ಶನಿವಾರ ಇಲ್ಲಿ ಹೇಳಿದರು.

~ನನಗೆ ಅಚ್ಚರಿಯಾಗಿದೆ. ಆದರೆ ಭ್ರಮ ನಿರಸನಗೊಂಡಿಲ್ಲ. ಏಕೆಂದರೆ ಇದೆಲ್ಲಾ ಆಟದೊಳಗೆ ಇದ್ದದ್ದೇ~ ಎಂದು ಸ್ವಾಮಿ ವಿಶೇಷ ಸಿಬಿಐ ನ್ಯಾಯಾಧೀಶ ಒ.ಪಿ. ಸೈನಿ ಅವರು  ತಮ್ಮ ಅರ್ಜಿ ವಜಾ ಮಾಡಿದ ಕೆಲವೇ ನಿಮಿಷಗಳಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.

~ನಾನು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವೆ. ಅಗತ್ಯ ಬಿದ್ದಲ್ಲಿ ಸುಪ್ರೀಕೋರ್ಟ್ ಮೆಟ್ಟಿಲನ್ನೂ ಏರುವೆ~ ಎಂದು ಅವರು ದೃಢ ಪಡಿಸಿದರು.

ಭ್ರಷ್ಟಾಚಾರ ವಿರೋಧಿ ಸಮರ ಮುಂದುವರಿಯುತ್ತದೆ. ಮಾಜಿ ಹಣಕಾಸು ಸಚಿವ ಚಿದಂಬರಂ ಅವರ ವಿರುದ್ಧದ ಹೋರಾಟವೂ ನಿಲ್ಲದು ಎಂದು ಸ್ವಾಮಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT