ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜ್ಮಲ್ ದಾಳಿಗೆ ಕುಸಿದ ಇಂಗ್ಲೆಂಡ್

Last Updated 17 ಜನವರಿ 2012, 19:30 IST
ಅಕ್ಷರ ಗಾತ್ರ

ದುಬೈ: ಆಫ್ ಸ್ಪಿನ್ನರ್ ಸಯೀದ್ ಅಜ್ಮಲ್ (55ಕ್ಕೆ7) ಅವರ ಪ್ರಭಾವಿ ಬೌಲಿಂಗ್ ದಾಳಿಗೆ ಸಿಲುಕಿ ನಲುಗಿದ ಇಂಗ್ಲೆಂಡ್ ತಂಡದವರು ಇಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿತ ಕಂಡಿದ್ದಾರೆ.

ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಂಗಳವಾರ ಆರಂಭವಾದ ಈ ಪಂದ್ಯದಲ್ಲಿ ಇಂಗ್ಲೆಂಡ್ ತನ್ನ ಮೊದಲ ಇನಿಂಗ್ಸ್‌ನಲ್ಲಿ 72.3 ಓವರ್‌ಗಳಲ್ಲಿ 192 ರನ್‌ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಪ್ರಥಮ ಇನಿಂಗ್ಸ್ ಆರಂಭಿಸಿರುವ ಪಾಕ್ ಮೊದಲ ದಿನದಾಟದ ಅಂತ್ಯಕ್ಕೆ 15 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 42 ರನ್ ಗಳಿಸಿದೆ. ಮೊಹಮ್ಮದ್ ಹಫೀಜ್ ಮತ್ತು ತೌಫಿಕ್ ಉಮರ್ ತಂಡಕ್ಕೆ ಉತ್ತಮ ಆರಂಭ ನೀಡಿದರು.

ತಟಸ್ಥ ಸ್ಥಳದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ಗೆ ಮುಂದಾದ ಆ್ಯಂಡ್ರ್ಯೂ ಸ್ಟ್ರಾಸ್ ಬಳಗ ಆರಂಭದಲ್ಲೇ ಅಪಾಯಕ್ಕೆ ಸಿಲುಕಿತು. 43 ರನ್ ಪೇರಿಸುವಷ್ಟರಲ್ಲಿ ಐದು ವಿಕೆಟ್‌ಗಳು ಪತನಗೊಂಡವು. ಮ್ಯಾಟ್ ಪ್ರಯೋರ್ (ಔಟಾಗದೆ 70) ತಂಡದ ಕುಸಿತವನ್ನು ತಪ್ಪಿಸಲು ಪ್ರಯತ್ನಿಸಿದರು. ಆದರೆ ಉಳಿದ ಬ್ಯಾಟ್ಸ್‌ಮನ್‌ಗಳಿಂದ ಅವರಿಗೆ ಸರಿಯಾದ ಜೊತೆಯಾಟದ ನೆರವು ಲಭಿಸಲಿಲ್ಲ.

ಸಂಕ್ಷಿಪ್ತ ಸ್ಕೋರ್: ಇಂಗ್ಲೆಂಡ್: 72.3 ಓವರ್‌ಗಳಲ್ಲಿ 192 (ಮ್ಯಾಟ್ ಪ್ರಯೋರ್ ಔಟಾಗದೆ 70, ಗ್ರೇಮ್ ಸ್ವಾನ್ 34; ಸಯೀದ್ ಅಜ್ಮಲ್ 55ಕ್ಕೆ7); ಪಾಕಿಸ್ತಾನ: 15 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 42 (ಮೊಹಮ್ಮದ್ ಹಫೀಜ್ ಬ್ಯಾಟಿಂಗ್ 22, ತೌಫಿಕ್ ಉಮರ್ ಬ್ಯಾಟಿಂಗ್ 18).
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT