ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಅಟಲಜೀ ಕೇಂದ್ರಗಳನ್ನು ಯಶಸ್ವಿಗೊಳಿಸಿ'

Last Updated 26 ಡಿಸೆಂಬರ್ 2012, 9:32 IST
ಅಕ್ಷರ ಗಾತ್ರ

ಹಾವೇರಿ:  ಸರ್ಕಾರ ಹಾಗೂ ಜನಪ್ರತಿನಿಧಿಗಳು ರೂಪಿಸಿದ ಯೋಜನೆಗಳು ಯಶಸ್ವಿಗೊಳ್ಳಬೇಕಾದರೆ, ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಸಕಾಲ ಯೋಜನೆ ಅನುಷ್ಠಾನದಲ್ಲಿ ತೋರಿದ ಆಸಕ್ತಿಯನ್ನು ಅಟಲ್‌ಜೀ ಜನಸ್ನೇಹಿ ಕೇಂದ್ರಗಳ ನಿರ್ವಹಣೆಯಲ್ಲಿಯೂ ತೋರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಂ.ಉದಾಸಿ ಸಲಹೆ ಮಾಡಿದರು.

ಜಿಲ್ಲಾಡಳಿತ, ಕಂದಾಯ ಇಲಾಖೆಗಳ ಆಶ್ರಯದಲ್ಲಿ ಮಂಗಳವಾರ ನಗರದ ಮಿನಿ ವಿಧಾನಸೌಧದಲ್ಲಿ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಹಿಂದೆ ಇದ್ದ ನೆಮ್ಮದಿ ಕೇಂದ್ರಗಳ ಸ್ಥಾನದಲ್ಲಿ ಸರ್ಕಾರವೇ ಅಟಲ್‌ಜೀ ಜನಸ್ನೇಹಿ ಕೇಂದ್ರಗಳನ್ನಾಗಿ ಪರಿವರ್ತಿಸಿದೆ. ಜನಸೇವೆಗೆ ಮತ್ತಷ್ಟು ವೇಗ ಹಾಗೂ ಸರಳತೆ ಮಾಡಿಕೊಡುವುದೇ ಇದರ ಉದ್ದೇಶವಾಗಿದೆ ಎಂದರು.

ಜಿಲ್ಲೆಯಲ್ಲಿ 12 ನಾಡಕಚೇರಿ ಹಾಗೂ 7 ತಾಲ್ಲೂಕು ಕೇಂದ್ರಗಳಲ್ಲಿ ಒಟ್ಟು 19 ಅಟಲ್‌ಜೀ ಜನಸ್ನೇಹಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇವುಗಳ ಜತೆಗೆ ಜಿಲ್ಲೆಯಲ್ಲಿ ಕಡಕೋಳ, ಹಾನಗಲ್ಲ ತಾಲ್ಲೂಕಿನ ಬೆಳಗಾಲಪೇಟೆ, ತಿಳವಳ್ಳಿ,  ಹಾಗೂ ಆಡೂರಿನಲ್ಲಿ ಹೊಸ ಕೇಂದ್ರಗಳನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಈ ಕೇಂದ್ರಗಳಲ್ಲಿ ಜನರಿಗೆ ಅಗತ್ಯವಾದ 36 ವಿವಿಧ ಪ್ರಮಾಣ ಪತ್ರ ಮತ್ತು ದಾಖಲೆಗಳನ್ನು ನೀಡಲಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 24 ಅಟಲ್‌ಜೀ ಜನಸ್ನೇಹಿ ಕೇಂದ್ರಗಳು ಸ್ಥಾಪನೆಯಾದಂತಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಹೊಸದಾಗಿ ಆರಂಭಗೊಂಡ ಫ್ರಂಟ್ ಆಫೀಸ್‌ಗಳಲ್ಲಿ ದಾಖಲೆ ಹಾಗೂ ಪ್ರಮಾಣಪತ್ರ ನೀಡಿಕೆಗೆ ಅರ್ಜಿಗಳನ್ನು ಸ್ವೀಕರಿಸಿ, ಆ ಊರಿಗೆ ಹತ್ತಿರದ ನಾಡಕಚೇರಿ ಅಥವಾ ತಾಲ್ಲೂಕು ಕಚೇರಿ ವ್ಯಾಪ್ತಿಯ ಕೇಂದ್ರದಲ್ಲಿ ಪ್ರಮಾಣಪತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ನೆಹರೂ ಓಲೇಕಾರ ಮಾತನಾಡಿದರು. ವಿಧಾನಪರಿಷತ್ ಸದಸ್ಯ ಶಿವರಾಜ ಸಜ್ಜನರ, ಜಿ.ಪಂ. ಸದಸ್ಯ ರಾಜೇಂದ್ರ ಹಾವೇರಣ್ಣನವರ, ತಾ.ಪಂ. ಅಧ್ಯಕ್ಷೆ ಮೆಹರುನ್ನಿಸಾ ಜಗಳೂರ, ನಗರಸಭೆ ಅಧ್ಯಕ್ಷ ಜಗದೀಶ ಮಲಗೋಡ. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಿರೀಶ ತುಪ್ಪದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಎಚ್.ಜಿ.ಶ್ರೀವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಜಿ.ಜಗದೀಶ ಸ್ವಾಗತಿಸಿದರು. ಉಪವಿಭಾಗಾಧಿಕಾರಿ ಚನ್ನಬಸಪ್ಪ ನಿರೂಪಿಸಿದರು. ತಹಶೀಲ್ದಾರ್ ಶಿವಲಿಂಗು ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT