ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಅಡಿಕೆ ಬೆಲೆ ಸ್ಥಿರತೆ ಬಗ್ಗೆ ಆತಂಕ ಬೇಡ'

Last Updated 18 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಶಿರಸಿ: `ಅಡಿಕೆ ಬೆಲೆ ಸ್ಥಿರತೆ ಬಗ್ಗೆ ಬೆಳೆಗಾರರಲ್ಲಿ ಆತಂಕ ಬೇಡ. ಸಹಕಾರಿ ಸಂಸ್ಥೆಗಳು ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ಕಾಪಾಡುತ್ತವೆ' ಎಂದು ಸಹಕಾರಿ ಸಂಸ್ಥೆಗಳು ಪ್ರಮುಖರು ಬೆಳೆಗಾರರಿಗೆ ಭರವಸೆ ನೀಡಿದ್ದಾರೆ.

ಪ್ರಮುಖ ಅಡಿಕೆ ವಹಿವಾಟು ಸಂಸ್ಥೆ ಮುಖ್ಯಸ್ಥರಾದ `ಕ್ಯಾಂಪ್ಕೋ' ಅಧ್ಯಕ್ಷ ಕೊಂಕೋಡಿ ಪದ್ಮನಾಭ, `ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ' ಅಧ್ಯಕ್ಷ ಶಾಂತಾರಾಮ ಹೆಗಡೆ, `ಶಿರಸಿ ಟಿಎಂಎಸ್' ಅಧ್ಯಕ್ಷ ಜಿ.ಎಂ.ಹೆಗಡೆ ಹುಳಗೋಳ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

`ಪ್ರಸಕ್ತ ವರ್ಷ ಅಡಿಕೆ ಉತ್ಪಾದನೆ ಕುಂಠಿತವಾಗಿದ್ದು, ದಾವಣಗೆರೆ, ಬೀರೂರು ವ್ಯಾಪ್ತಿಯಲ್ಲಿ ಸಾಕಷ್ಟು ಮರಗಳು ನಾಶವಾಗಿವೆ. ಕೇರಳದಲ್ಲಿ ಅಡಿಕೆ ಭೂಮಿಯನ್ನು ರಬ್ಬರ್ ಆಕ್ರಮಿಸಿದೆ. ಮುಂದಿನ ಹಂಗಾಮಿನಲ್ಲಿ ಅಡಿಕೆ ಮಾರುಕಟ್ಟೆಯಲ್ಲಿ ಈಗಿನ ದರವನ್ನೇ ಕಾಯ್ದುಕೊಳ್ಳುವ ಭರವಸೆ ಇದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT