ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಅಡಿಕೆ ಬೆಳೆಗಾರರಿಗೆ ಶೀಘ್ರ ಪ್ಯಾಕೇಜ್ ಘೋಷಣೆ'

Last Updated 4 ಏಪ್ರಿಲ್ 2013, 9:06 IST
ಅಕ್ಷರ ಗಾತ್ರ

ಶಿವಮೊಗ್ಗ: ಅಡಿಕೆ ಬೆಳೆಗಾರರಿಗೆ ಸದ್ಯದಲ್ಲೇ ಪರಿಹಾರದ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಪ್ರಧಾನ ಮಂತ್ರಿ ಮನಮೋಹನ್‌ಸಿಂಗ್ ಭರವಸೆ ನೀಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

ಕೇಂದ್ರದ ಸಚಿವರಾದ ಆಸ್ಕರ್ ಫರ್ನಾಂಡಿಸ್, ಕೆ.ಎಚ್. ಮುನಿಯಪ್ಪ ಅವರನ್ನು ಒಳಗೊಂಡ ರಾಜ್ಯದ 9 ಸಂಸತ್ ಸದಸ್ಯರ ನಿಯೋಗ ಪ್ರಧಾನಮಂತ್ರಿ ಮನಮೋಹನ ಸಿಂಗ್ ಅವರನ್ನು ಮಂಗಳವಾರ ಭೇಟಿ ಮಾಡಿ, ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಭರವಸೆ ನೀಡಿದರು ಎಂದರು.

ಸಾಲಮನ್ನಾ ಸಾಧ್ಯತೆಗಳನ್ನು ಪ್ರಧಾನಿ ಅವರು ಅಲ್ಲಗಳೆದಿದ್ದು, ಪ್ಯಾಕೇಜ್ ಘೋಷಿಸುವ ಬಗ್ಗೆ ಸಹಮತ ವ್ಯಕ್ತಪಡಿಸಿದರು. ಹಾಗೆಯೇ, ಕೃಷಿ ಸಚಿವ ಶರದ್ ಪವಾರ್ ಕೂಡ ಈ ಬಗ್ಗೆ ವಿವರವಾದ ಪ್ರಸ್ತಾವ ಕಳುಹಿಸಲು ಸೂಚಿಸಿದ್ದಾರೆ. ಅಲ್ಲದೇ, ವಿದೇಶಗಳಿಂದ ಕಳ್ಳ ಸಾಗಾಣೆಯಲ್ಲಿ ಬರುವ ಕಡಿಮೆ ದರ್ಜೆಯ ಅಡಿಕೆಗೆ ಆಮದು ಶುಲ್ಕ ಹೇರುವಂತೆ ಕೋರಿ ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ಆನಂದಶರ್ಮ ಅವರಿಗೂ ಮನವಿ ಮಾಡಲಾಯಿತು. ಈ ಎಲ್ಲರಿಂದಲೂ ಆಶಾದಾಯಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ಇದು ಪಕ್ಷಾತೀತ ನಿಯೋಗ. ರೈತರ ಹಿತದೃಷ್ಟಿಯಿಂದ ಎಲ್ಲಾ ಪಕ್ಷಗಳು ಒಟ್ಟು ಸೇರಿ ಮಾಡಿದ ಪ್ರಯತ್ನ ಎಂದು ಅವರು ಹೇಳಿದರು.
ಈ ಹಿಂದೆ ತಾವು ಗೋರಕ್‌ಸಿಂಗ್ ವರದಿಯನ್ನು ಭಾಗಶಃ ವಿರೋಧಿಸಿದ್ದು ನಿಜ. ಈಗಲೂ ಅದಕ್ಕೆ ಬದ್ಧವಾಗಿದ್ದು, ಸಾಂಪ್ರದಾಯಿಕ ಅಡಿಕೆ ಬೆಳೆಗಾರರ ದೃಷ್ಟಿಯಿಂದ ಅ ವರದಿ ಅನುಷ್ಠಾನಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಬಿ. ಭಾನುಪ್ರಕಾಶ್, ಜಿಲ್ಲಾ ಘಟಕದ ಅಧ್ಯಕ್ಷ ಆರ್.ಕೆ. ಸಿದ್ದರಾಮಣ್ಣ, ಪದಾಧಿಕಾರಿಗಳಾದ ಎಸ್. ದತ್ತಾತ್ರಿ, ಡಿ.ಎಸ್. ಅರುಣ್, ಎಚ್.ಸಿ. ಬಸವರಾಜಪ್ಪ, ಮಹೇಂದ್ರಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT