ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡ್ಡ ಮತದಾನ ತನಿಖೆಗೆ ಸಮಿತಿ- ಶೆಟ್ಟರ್

Last Updated 23 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ರಾಷ್ಟ್ರಪತಿ ಚುನಾವಣೆಯಲ್ಲಿ ರಾಜ್ಯದ 15 ಬಿಜೆಪಿ ಶಾಸಕರು ಅಡ್ಡ ಮತದಾನ ಮಾಡಿದ ಪ್ರಕರಣದ ತನಿಖೆಗೆ ಸಮಿತಿಯನ್ನು ರಚಿಸಲಾಗುವುದು. ಸಮಿತಿಯು ಕೂಲಂಕಶವಾಗಿ ಪರಿಶೀಲನೆ ಮಾಡಿ ನೀಡುವ ವರದಿಯ ಆಧಾರದಲ್ಲಿ ಈ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದರು.

ವಾರ್ತಾ ಇಲಾಖೆಯ ಆಶ್ರಯದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ ಸಭಾಂಗಣದಲ್ಲಿ ಸೋಮವಾರ ನಡೆದ `ಕರ್ನಾಟಕ ವಿಧಾನಸಭೆ-60~ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ವಿಧಾನಸಭೆಯ ಅರವತ್ತನೇ ವರ್ಷಾಚರಣೆಯನ್ನು ವಿಧಾನಸಭೆಯಲ್ಲಿ ಇತ್ತೀಚೆಗೆ ಸಂಭ್ರಮದಿಂದ ಆಚರಿಸಲಾಗಿದೆ. ವಿಧಾನಸಭೆಯ ಇತಿಹಾಸದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಒದಗಿಸುವ ಉದ್ದೇಶದಿಂದ ಈ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಇಲ್ಲಿನ ಛಾಯಾಚಿತ್ರಗಳನ್ನು ವೀಕ್ಷಿಸಿದಾಗ ವಿಧಾನಸಭೆಯ ಇತಿಹಾಸ ಕಣ್ಮುಂದೆ ಬರುತ್ತದೆ~ ಎಂದು ಅವರು ಹೇಳಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್ ಕುಮಾರ್, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಾರ್ತಾ ಇಲಾಖೆಯ ನಿರ್ದೇಶಕ ವಿಶು ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಬುಧವಾರದ ವರೆಗೆ ಬೆಳಿಗ್ಗೆ 9.30ರಿಂದ ರಾತ್ರಿ 7ರ ವರೆಗೆ ಪ್ರದರ್ಶನ ಮುಂದುವರಿಯಲಿದೆ. ವಿಧಾನಸೌಧಕ್ಕೆ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಅಡಿಗಲ್ಲು ಹಾಕಿದ ಘಟನೆಯಿಂದ ಹಿಡಿದು ಜೂನ್ 18ರಂದು ವಿಧಾನಸಭೆಯ 60ನೇ ವರ್ಷಾಚರಣೆ ಕಾರ್ಯಕ್ರಮದ ವರೆಗಿನ ಅಪರೂಪದ ಚಿತ್ರಗಳು ಈ ಪ್ರದರ್ಶನದಲ್ಲಿ ಇವೆ. ಒಟ್ಟು 175 ಛಾಯಾಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT