ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ಣೇಶ್ವರ ಗ್ರಾ.ಪಂ: ಒಳಚರಂಡಿ, ಶೌಚಾಲಯ ಪರಿಶೀಲನೆ

Last Updated 9 ಜನವರಿ 2012, 19:30 IST
ಅಕ್ಷರ ಗಾತ್ರ

ದೇವನಹಳ್ಳಿ: ತಾಲ್ಲೂಕಿನ ಅಣ್ಣೇಶ್ವ ಗ್ರಾಮ ಪಂಚಾಯಿತಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿ ಜಿ.ಬಾಲಸುಬ್ರಮಣ್ಯಂ ಮತ್ತು ಸಹಾಯಕ ಸಲಹೆಗಾರ ಮಾಥುರ್ ಸೋಮವಾರ ಭೇಟಿ ನೀಡಿ, ಪಂಚಾಯಿತಿ ವ್ಯಾಪ್ತಿಯಲ್ಲಿನ ರಸ್ತೆ ಮತ್ತು ನೈರ್ಮಲ್ಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಂತರ ಗ್ರಾಮದ ಪ್ರತಿ ಮನೆಗಳಗೆ ಭೇಟಿ ನೀಡಿ, ಶೌಚಾಲಯ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಪರಿಶೀಲಿಸಿದರು. ಶಾಲೆಗಳಲ್ಲಿ ಸೋಲಾರ್ ದೀಪ ಅಳವಡಿಕೆ, ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಸಿಮೆಂಟ್ ಕಸದ ತೊಟ್ಟಿ ನಿರ್ವಹಣೆಯಯನ್ನು ವೀಕ್ಷಿಸಿದರು.

ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳ ಸಭೆ ನಡೆಸಿದ ಅವರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು. 

 ಸ್ತ್ರೀ ಶಕ್ತಿ ಸಂಘಗಳ  ರಚನೆ ಮತ್ತು ವಹಿವಾಟು, ಸಮುದಾಯ ಸಭೆ, ಗ್ರಾಮೀಣ ರಸ್ತೆ ಅಭಿವೃದ್ಧಿ, ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಜನಸಂಖ್ಯೆ, ಕುಡಿಯುವ ನೀರು ಸರಬರಾಜು, ಪಡಿತರ ಚೀಟಿ ಮತ್ತು ವಿತರಣೆ ಬಗ್ಗೆ ಗ್ರಾಮ ಪಂಚಾಯಿತಿ ಸದಸ್ಯರು ,  ಅಧಿಕಾರಿಗಳೊಂದಿಗೆ ಚರ್ಚಿಸಿದರು.

ವಾರ್ಷಿಕ ಪಂಚಾಯಿತಿ ಬಜೆಟ್, ಸರ್ಕಾರ ನೀಡುತ್ತಿರುವ ಅನುದಾನ ಬಳಕೆ, ಸಂಪನ್ಮೂಲ ಸಂಗ್ರಹ, ನೌಕರರ ವೇತನ, ತೆರಿಗೆ ವಸೂಲಾತಿ, ಸಮುದಾಯ ಪ್ರಾಥಮಿಕ ಆರೂಗ್ಯ ಕೇಂದ್ರಗಳ ನಿರ್ವಹಣೆ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿಪಡೆದರು.

 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗೋಪಾಲಯ್ಯ, ಗ್ರಾ.ಪಂ ಸದಸ್ಯ ಚಂದ್ರಶೇಖರ್, ನಾರಾಯಣಸ್ವಾಮಿ, ಅಪ್ಪಯ್ಯಣ್ಣ, ದೊಡ್ಡಸೊಣ್ಣೆ ಮಂಜೇಗೌಡ, ರಾಮಚಂದ್ರಪ್ಪ, ಕೃಷ್ಣಪ್ಪ, ವೆಂಕಟೇಶ ಮತ್ತಿತರರು ಹಾಜರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT