ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ವಸ್ತ್ರ: ಅಮೆರಿಕದ ನಿಗಾ ಹೆಚ್ಚಳ

Last Updated 3 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ವಿವಿಧ ಭಯೋತ್ಪಾದಕ ಸಂಘಟನೆಗಳು ಮತ್ತು ಭಾರತ ಸೇರಿದಂತೆ ಕೆಲವು ರಾಷ್ಟ್ರಗಳ ಅಣ್ವಸ್ತ್ರ ಕಾರ್ಯಕ್ರಮ ಕುರಿತ ತನ್ನ ಬೇಹುಗಾರಿಕೆಯನ್ನು ಅಮೆರಿಕ ತೀವ್ರಗೊಳಿಸಿದೆ. ಇದಕ್ಕಾಗಿ ಕೋಟ್ಯಂತರ ಡಾಲರ್ ವೆಚ್ಚದ ಯೋಜನೆ ರೂಪಿಸಿದೆ.

ಅಮೆರಿಕದ ಬೇಹುಗಾರಿಕಾ ಸಂಸ್ಥೆಗಳು ಈ ಯೋಜನೆಗಾಗಿ ಸಿದ್ಧ ಪಡಿಸಿರುವ ಪಟ್ಟಿಯಲ್ಲಿ ಅಲ್ ಖೈದಾ ಸೇರಿದಂತೆ ಹಲವು ಉಗ್ರ ಸಂಘಟನೆಗಳು ಸೇರಿವೆ. ಜೊತೆಗೆ ಉತ್ತರ ಕೊರಿಯಾ, ಇರಾನ್ ಹಾಗೂ ಪರಸ್ಪರ ಬದ್ಧ ವೈರತ್ವ ಇರುವ ಭಾರತ ಮತ್ತು ಪಾಕಿಸ್ತಾನಗಳ ಅಣ್ವಸ್ತ್ರ ಸಂಬಂಧಿ ಚಟುವಟಿಕೆಗಳ ಮೇಲೂ ಅಮೆರಿಕ ಕಣ್ಗಾವಲು ಇರಿಸಿದೆ ಎಂದು `ವಾಷಿಂಗ್ಟನ್ ಪೋಸ್ಟ್' ಪತ್ರಿಕೆ ಮಂಗಳವಾರ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT