ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಉಪನ್ಯಾಸಕರ ಪ್ರತಿಭಟನೆ

Last Updated 6 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.

`ರಾಜ್ಯದ 450 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 3,500 ಮಂದಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಉಪನ್ಯಾಸಕರ ಸೇವೆಯನ್ನು ಎಂಟು ವರ್ಷಗಳಿಂದಲೂ ಕಾಯಂಗೊಳಿಸಿಲ್ಲ. ಈ ಸಂಬಂಧ ಸರ್ಕಾರಕ್ಕೆ ಮತ್ತು ಶಿಕ್ಷಣ ಸಚಿವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ~ ಎಂದು ಒಕ್ಕೂಟದ ಅಧ್ಯಕ್ಷ ರವಿಕುಮಾರ್ ಹೇಳಿದರು.

ಅತಿಥಿ ಉಪನ್ಯಾಸಕರಿಗೆ ಎರಡು ವರ್ಷಗಳಿಂದ ವೇತನ ನೀಡಿಲ್ಲ. ಇದರಿಂದ ಉಪನ್ಯಾಸಕರು ಮತ್ತು ಅವರ ಕುಟುಂಬ ಸದಸ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜೀವನ ನಿರ್ವಹಣೆಗೆ ತೊಂದರೆಯಾಗಿದೆ. ಸೇವಾ ಭದ್ರತೆ ಇಲ್ಲದೆ ಉಪನ್ಯಾಸಕರು ತೊಂದರೆ ಅನುಭವಿಸುವಂತಾಗಿದೆ. ಮತ್ತೊಂದೆಡೆ ಅತಿಥಿ ಉಪನ್ಯಾಸಕರ ವಯೋಮಿತಿ ಮೀರುತ್ತಿರುವುದರಿಂದ ಅವರು ಸರ್ಕಾರಿ ಕೆಲಸಕ್ಕೆ ಸೇರುವ ಸಾಧ್ಯತೆಯೂ ಕ್ಷೀಣಿಸುತ್ತಿದೆ ಎಂದರು.

ರಾಜ್ಯದ ವಿವಿಧ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮಂಗಳವಾರವೂ ಪ್ರತಿಭಟನೆ ಮುಂದುವರೆಸುವುದಾಗಿ ಒಕ್ಕೂಟದ ಸದಸ್ಯರು ಹೇಳಿದರು. ಒಕ್ಕೂಟದ ಗೌರವ ಅಧ್ಯಕ್ಷ ವಿ.ಗಣೇಶ್, ಪ್ರಧಾನ ಕಾರ್ಯದರ್ಶಿ ಸಿ.ಮುನಿಯಪ್ಪ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT