ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಪ್ರಕರಣ : ಶೀಘ್ರ ತನಿಖೆಗೆ ಸುಪ್ರೀಂ ಆದೇಶ

Last Updated 4 ಜನವರಿ 2013, 9:26 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿರುವ ಹಿನ್ನೆಲೆಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕುರಿತಾದ ಎಲ್ಲಾ ಪ್ರಕರಣಗಳ ಶೀಘ್ರ ತನಿಖೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ನೊಟೀಸ್ ಜಾರಿ ಮಾಡಿದೆ.

ಅಲ್ಲದೆ ಹೆಚ್ಚುವರಿ ನ್ಯಾಯಾಲಯಗಳ ಸ್ಥಾಪನೆ, ನ್ಯಾಯಾಂಗಗಳ ಮೂಲಸೌಕರ್ಯ ಸುಧಾರಣೆ ಹಾಗೂ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವಂತೆಯೂ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಇದೇ ವೇಳೆ ಮಹಿಳೆಯರ ವಿರುದ್ಧ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರು ಮತ್ತು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಳ್ಳಿಹಾಕಿರುವ ಸುಪ್ರೀಂಕೋರ್ಟ್, ಸಂಸದರು ಮತ್ತು ಶಾಸಕರನ್ನು ಅನರ್ಹಗೊಳಿಸುವ ವಿಷಯ ತನ್ನ ನ್ಯಾಯ ನಿರ್ವಹಣೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT