ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕ ಭಾರದ ಲಾರಿಗಳಿಗೆ ದಂಡ ವಿಧಿಸಲು ಒತ್ತಾಯ

Last Updated 7 ಜೂನ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಕೆಲ ಲಾರಿ ಮಾಲೀಕರಿಂದ ಅಧಿಕಾರಿಗಳು ಲಂಚ ಪಡೆದು, ನಿಗದಿತ ಪ್ರಮಾಣಕ್ಕಿಂತ ಅಧಿಕ ಭಾರದ ವಸ್ತುಗಳನ್ನು ಸಾಗಿಸಲು ಅನುಮತಿ ನೀಡುತ್ತಿರುವುದರಿಂದ ಇತರ ಲಾರಿಗಳು ಕೆಲಸವಿಲ್ಲದೇ ನಿಲ್ಲಬೇಕಾಗಿದ್ದು, ಅಧಿಕ ಭಾರದಿಂದ ರಸ್ತೆಗಳೂ ಹಾಳಾಗುತ್ತಿವೆ~ ಎಂದು ಕರ್ನಾಟಕ ಲಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಬಿ.ಚನ್ನಾರೆಡ್ಡಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

`ನಿಗದಿತ ಭಾರಕ್ಕಿಂತ ಅಧಿಕ ಭಾರ ಹೊತ್ತೊಯ್ಯುತ್ತಿರುವ ಲಾರಿಗಳನ್ನು ವಶಕ್ಕೆ ಪಡೆಯುವ ಕ್ರಮಗಳು ಗುಜರಾತ್, ಕೇರಳ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಜಾರಿಯಲ್ಲಿವೆ.

 ಕರ್ನಾಟಕದಲ್ಲಿ ಈ ಪದ್ಧತಿ ಇಲ್ಲ. ಈಗಲಾದರೂ ಅಧಿಕಾರಿಗಳು ಅಧಿಕ ಭಾರದ ಲಾರಿಗಳನ್ನು ಪತ್ತೆಹಚ್ಚಿ ದಂಡ ವಿಧಿಸಬೇಕು~ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT