ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಅಧಿಕಾರಕ್ಕೆ ಬಂದರೆ ನೀರಾವರಿಗೆ ಆದ್ಯತೆ'

Last Updated 22 ಡಿಸೆಂಬರ್ 2012, 9:51 IST
ಅಕ್ಷರ ಗಾತ್ರ

ಸಿದ್ದಾಪುರ: `ನಮಗೆ ಮುಂದಿನ ಐದು ವರ್ಷಗಳ ಅವಧಿಗೆ ಜನತೆ ಅಧಿಕಾರ ನೀಡಿದ್ದೇ ಆದರೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪ್ರಥಮ ಆದ್ಯತೆಯ ಮೇರೆಗೆ ಪೂರ್ಣಗೊಳಿಸುತ್ತೇವೆ' ಎಂದು ಮಾಜಿ ಮುಖ್ಯಮಂತ್ರಿಯೂ ಆದ  ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ಪಟ್ಟಣದ ನೆಹರು ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜೆಡಿಎಸ್‌ನ ಬೃಹತ್ ಸಮಾವೇಶ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.`ನಾನು, ಮಧು ಬಂಗಾರಪ್ಪ, ಶಶಿಭೂಷಣ ಹೆಗಡೆ ರಾಜ್ಯ ರಾಜಕಾರಣದಲ್ಲಿ ತ್ರಿಮೂರ್ತಿಗಳಂತೆ ಕೆಲಸ ಮಾಡಲಿದ್ದೇವೆ' ಎಂದರು.

`ರಾಮಕೃಷ್ಣ ಹೆಗಡೆ, ಬಂಗಾರಪ್ಪ ಮತ್ತು ದೇವೇಗೌಡ ಅವರು ಸಾಮಾಜಿಕವಾಗಿ ಹಲವು ಹೋರಾಟ ನಡೆಸಿದವರು. ಅವರ ಹೋರಾಟವೇ ನಮಗೆ ಮಾರ್ಗದರ್ಶಕ. 1983ರಲ್ಲಿ ಜನತಾರಂಗ ಮೊದಲ ಕಾಂಗ್ರೆಸ್ಸೇತರ ಸರ್ಕಾರವಾಗಿ ಬಂದಾಗ ಮೊದಲ ಬಾರಿ  ಗ್ರಾಮೀಣ ಅಭಿವೃದ್ಧಿಯ ಯಗ ರಾಜ್ಯದಲ್ಲಿ ಆರಂಭವಾಯಿತು' ಎಂದರು.

`ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಅವುಗಳ ಪರಿಹಾರಕ್ಕೆ ಯೋಜನೆ ರೂಪಿಸುವ ಆಸಕ್ತಿಯಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ  ಇಲ್ಲಿಗೆ ಭೇಟಿ ನೀಡಿದ ನಂತರ ಅರಣ್ಯ ಅತಿಕ್ರಮಣದಾರರ ಸಮಸ್ಯೆ ಪರಿಹರಿಸಲು ಬೆಂಗಳೂರಿನಲ್ಲಿ  ಜನಪ್ರತಿನಿಧಿಗಳ ಸಭೆ ನಡೆಸಿದ್ದೆ. ಆ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೂ ಸೂಚನೆ ನೀಡಿದ್ದೆ. ಆದರೆ ಎರಡೇ ತಿಂಗಳಿನಲ್ಲಿ  ನಮ್ಮ ಸರ್ಕಾರ ಹೋಯಿತು. ನಮಗೆ ಅಧಿಕಾರ ಬಂದರೆ ಅತಿಕ್ರಮಣದಾರರ ಸಮಸ್ಯೆಯನ್ನು ಕಾನೂನು ವ್ಯಾಪ್ತಿಯಲ್ಲಿ ಸರಿಪಡಿಸಿ, ಪರಿಹರಿಸುತ್ತೇವೆ. ಗರ್ಭಿಣಿಯರಿಗೆ ಐದು ತಿಂಗಳು ತುಂಬಿದ ನಂತರ ಮಾಸಿಕ ರೂ 5

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT