ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ಅಮಾನತು: ಆಗ್ರಹ

Last Updated 3 ಏಪ್ರಿಲ್ 2011, 5:45 IST
ಅಕ್ಷರ ಗಾತ್ರ

ಕೊಪ್ಪಳ: ನಗರದಲ್ಲಿ ಈಚೆಗೆ ರೈತರ ಮೇಲೆ ಲಾಠಿ ಪ್ರಹಾರ ನಡೆಸಿದ ಪೊಲೀಸರ ಕ್ರಮವನ್ನು ಖಂಡಿಸಿ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎ.ಐ.ಟಿ.ಯು.ಸಿ) ಜಿಲಾ ಸಮಿತಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.ನಗರದ ರೈಲ್ವೆ ನಿಲ್ದಾಣದಿಂದ ಮೆರವಣಿಗೆಯಲ್ಲಿ ಆಗಮಿಸಿದ ಪ್ರತಿಭಟನಾಕಾರರು, ನಂತರ ತಹಸೀಲ ಕಚೇರಿ ಮುಂದೆ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಅಧ್ಯಕ್ಷ ಬಸವರಾಜ ಶೀಲವಂತರ, ರೈತರ ಮೇಲೆ ದೌರ್ಜನ್ಯ ನಡೆಸಿದ ಪೊಲೀಸರ ಕ್ರಮವನ್ನು ಖಂಡಿಸಿದರು.ಕೂಡಲೇ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು. ಈ ಬೇಡಿಕೆಗಳನ್ನು ಈಡೇರಿಸಲು ವಿಳಂಬ ಮಾಡಿದರೆ, ಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದೂ ಅವರು ಎಚ್ಚರಿಸಿದರು.
 

ಎ.ಐ.ಟಿ.ಯು.ಸಿ. ಜಿಲ್ಲಾ ಅಧ್ಯಕ್ಷ ಬಸವರಾಜ ಶೀಲವಂತರ ಮಾತನಾಡಿದರು. ಟಿ.ಯು.ಸಿ.ಐ. ರಾಜ್ಯ ಅಧ್ಯಕ್ಷ ಡಿ.ಎಚ್.ಪೂಜಾರ, ಮುಖಂಡರಾದ ವಿಠ್ಠಪ್ಪ ಗೋರಂಟ್ಲಿ, ಜೆ.ಭಾರದ್ವಾಜ, ಶಿವಾನಂದ ಹೊದ್ಲೂರು ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT