ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ನಿರ್ಲಕ್ಷ: ಬಿಹಾರದ 23 ಮಕ್ಕಳು ಸಾವು

Last Updated 21 ಜುಲೈ 2013, 11:32 IST
ಅಕ್ಷರ ಗಾತ್ರ

ಪಟ್ನಾ (ಪಿಟಿಐ): ಬಿಹಾರದಲ್ಲಿ ವಿಷಪೂರಿತ ಆಹಾರ ಸೇವಿಸಿ 23 ಮಕ್ಕಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ `ಅಧಿಕಾರಿಗಳ ನಿರ್ಲಕ್ಷವೇ' ಈ ಘಟನೆಗೆ ಕಾರಣ ಎಂದು ತನಿಖಾ ಸಂಸ್ಥೆಯ ಉನ್ನತ ಮೂಲಗಳು ತಿಳಿಸಿವೆ.

ಶೇಖರಿಸಿರುವ ಆಹಾರ ಪದಾರ್ಥಗಳು ಮತ್ತು ತಯಾರಿಸಿದ ಆಹಾರವನ್ನು ಸಂಬಂಧಪಟ್ಟ ಅಧಿಕಾರಿಗಳು ಪರೀಕ್ಷಿಸದೇ ಶಾಲಾ ಮಕ್ಕಳಿಗೆ ನೀಡಿದ್ದಾರೆ. ಇದರಿಂದ ಈ ದುರಂತ ಸಂಭವಿಸಿದೆ ಎಂದು ತನಿಖಾ ಸಂಸ್ಥೆಯ ವರದಿಯಲ್ಲಿ ಹೇಳಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಅಲ್ಲದೇ, ಶೇಖರಿಸಿರುವ ಆಹಾರ ಪದಾರ್ಥಗಳ ಪರಿಶೀಲನೆ ಮತ್ತು ಆಹಾರವನ್ನು ಶುಚಿಯಾಗಿ ತಯಾರಿಸಬೇಕು ಎಂಬ ನಿಬಂಧನೆಗಳನ್ನು ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT