ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ವಿರುದ್ಧ ಕ್ರಮ ಭರವಸೆ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಹಣ ಕಣ್ಮರೆ
Last Updated 1 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಇರಿಸಿದ್ದ 12 ಕೋಟಿ ಠೇವಣಿ ಕಣ್ಮರೆಯಾಗಲು ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ವಿಧಾನಸಭೆಯಲ್ಲಿ ತಿಳಿಸಿದರು.

ವಿರೋಧ ಪಕ್ಷದ ನಾಯಕ ಎಚ್. ಡಿ.ಕುಮಾರಸ್ವಾಮಿ ಅವರು ಶೂನ್ಯವೇಳೆಯಲ್ಲಿ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಈಗಾಗಲೇ ತಮಿಳುನಾಡಿನ ಸಿಬಿಐ ತನಿಖೆ ಆರಂಭಿಸಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಒಂದು ಸುತ್ತಿನ ಚರ್ಚೆ ನಡೆದಿದೆ ಎಂದರು.

ಇದೇ ರೀತಿ ಎಲ್ಲೆಲ್ಲಿ ಅವ್ಯವಹಾರ ಆಗಿದೆ ಎಂಬ ಬಗ್ಗೆ ವರದಿ ತರಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಸರ್ಕಾರದ ಹಣ ಲೂಟಿಯಾಗಲು ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದರು.

ಡೆಂಗೆ ಜ್ವರದಿಂದ ಮೃತಪಟ್ಟವರಿಗೆ ಮುಖ್ಯಮಂತ್ರಿಗಳ ನಿಧಿಯಿಂದ ಪರಿಹಾರ ನೀಡಲಾಗುವುದು. ಎನ್‌ಜಿಇಎಫ್ ಪುನರಾರಂಭದ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಜುಲೈ 31ರಂದು `ಪ್ರಜಾವಾಣಿ'ಯಲ್ಲಿ ಪ್ರಕಟವಾಗಿದ್ದ `ಕೆಐಎಡಿಬಿ ಬ್ಯಾಂಕ್ ಠೇವಣಿ ರೂ12 ಕೋಟಿ ಕಣ್ಮರೆ' ವಿಶೇಷ ವರದಿ ಬಗ್ಗೆ ಪ್ರಸ್ತಾಪಿಸಿದ ಕುಮಾರಸ್ವಾಮಿ, ಸರ್ಕಾರದ ಹಣ ಲೂಟಿಯಾಗಲು ಕಾರಣರಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ರಾಮನಗರ - ಚನ್ನಪಟ್ಟಣ ನಗರಾಭಿವೃದ್ಧಿ ಪ್ರಾಧಿಕಾರ, ಮಂಡ್ಯದಲ್ಲೂ ಇದೇ ರೀತಿ ಆಗಿತ್ತು. ಇನ್ನಾದರೂ ಈ ಬಗ್ಗೆ ಎಚ್ಚರವಹಿಸಿ ಎಂದು ಆಗ್ರಹಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗೆ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT