ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳು ತನಿಖೆಗೆ ಸಹಕರಿಸಲಿ

Last Updated 5 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಆಂಧ್ರಪ್ರದೇಶದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ತಂಡಕ್ಕೆ ಆ ರಾಜ್ಯದ ಐಎಎಸ್ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ಎಐಸಿಸಿ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ವಿ. ಹನುಮಂತರಾವ್ ಆಗ್ರಹಿಸಿದರು.

`ಆಂಧ್ರಪ್ರದೇಶದ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರನ್ನು ಇತ್ತೀಚೆಗೆ ಭೇಟಿ ಮಾಡಿರುವ ಐಎಎಸ್ ಅಧಿಕಾರಿಗಳು ಅಕ್ರಮ ಗಣಿಗಾರಿಕೆ ಕುರಿತ ತನಿಖೆಯಿಂದ ತಮ್ಮನ್ನು ಹೊರಗಿಡಬೇಕು ಎಂಬ ಬೇಡಿಕೆ ಇಟ್ಟಿರುವುದು ಸರಿಯಲ್ಲ. ಅಧಿಕಾರಿಗಳು ತನಿಖಾ ತಂಡಕ್ಕೆ ಸಂಪೂರ್ಣ ಸಹಕಾರ ನೀಡಬೇಕು~ ಎಂದು ಹನುಮಂತರಾವ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರಾಜ್ಯ ವಿಧಾನಸಭೆಗೆ ಯಾವುದೇ ಸಂದರ್ಭ ಚುನಾವಣೆ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುನಾವಣಾ ಸಿದ್ಧತೆ ಆರಂಭಿಸಿದೆ. ಪಕ್ಷದ ಕಾರ್ಯಕರ್ತರನ್ನು ಸಂಘಟಿಸುವ ಉದ್ದೇಶದಿಂದ ಬಳ್ಳಾರಿ, ಕೊಪ್ಪಳ ಮತು ಗದಗ ಜಿಲ್ಲಾ ಪ್ರವಾಸ ಸೋಮವಾರದಿಂದ ಆರಂಭವಾಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT