ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಕ್ಷರತೆ ದೇಶದ ಪ್ರಗತಿಗೆ ಶಾಪ

Last Updated 26 ಜನವರಿ 2012, 19:30 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ಅನಕ್ಷರತೆ ಇನ್ನೂ ದೇಶಕ್ಕೆ ಒಂದು ಶಾಪವಾಗಿ ಉಳಿದಿದೆ. ಅದನ್ನು ಹೋಗಲಾಡಿಸಲು ವಿದ್ಯಾವಂತ ಸಮುದಾಯ ಪ್ರಯತ್ನಿಸಬೇಕು ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಇಲ್ಲಿ ಗುರುವಾರ ಸಲಹೆ ಮಾಡಿದರು.

ಇಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಮಾತನಾಡಿದರು. ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಕುಡಿಯುವ ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದರು.

ತಹಶೀಲ್ದಾರ್ ಪಿ.ವಿ.ಪೂರ್ಣಿಮಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪೊಲೀಸ್, ಗೃಹರಕ್ಷಕ ದಳ ಮತ್ತು ವಿದ್ಯಾರ್ಥಿಗಳಿಂದ ಆಕರ್ಷಕ ಕವಾಯತು ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
 ಜಿ.ಪಂ. ಸದಸ್ಯ ಆರ್.ನಾರಾಯಣಸ್ವಾಮಿ, ತಾ.ಪಂ. ಇಒ ಬಸವರಾಜಪ್ಪ, ಅಧ್ಯಕ್ಷ ಜಿ.ಎಂ.ವೆಂಕಟರೆಡ್ಡಿ, ಉಪಾಧ್ಯಕ್ಷ ಕೊರ‌್ನಹಳ್ಳಿ ಆಂಜಿ, ಪುರಸಭೆ ಅಧ್ಯಕ್ಷ ಎಸ್.ಶ್ರೀನಿವಾಸಪ್ಪ, ಬಿಇಒ ಎಚ್.ಮಹಮದ್ ಖಲೀಲ್, ಎಂಜಿನಿಯರ್ ವೆಂಕಟರಾಯಪ್ಪ, ಮೋಹನ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಸಿ.ನಾಗರಾಜ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್ ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT