ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಧಿಕೃತ ನೀರಿನ ಶುದ್ಧೀಕರಣ ಘಟಕಕ್ಕೆ ಬೀಗ

Last Updated 19 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪಾಲಿಕೆ ಅಥವಾ ಇನ್ನಿತರೆ ಯಾವುದೇ ಇಲಾಖೆಯಿಂದ ಪರವಾನಗಿ ಪಡೆಯದೆ ಸುಮಾರು ಎರಡು ತಿಂಗಳಿಂದ ಅನಧಿಕೃತವಾಗಿ ನಡೆಸುತ್ತಿದ್ದ ನೀರಿನ ಶುದ್ಧೀಕರಣ ಹಾಗೂ ಮಾರಾಟ ಘಟಕಕ್ಕೆ ಬಿಬಿಎಂಪಿ ಪೂರ್ವ ವಲಯದ ಆರೋಗ್ಯಾಧಿಕಾರಿಗಳು ಗುರುವಾರ ಬೀಗ ಜಡಿದಿದ್ದಾರೆ.

ಈ  ಕಾರ್ಯಾಚರಣೆ ಸಂದರ್ಭದಲ್ಲಿ ನೀರಿನ ಕ್ಯಾನ್‌ಗಳು, ಡ್ರಮ್‌ಗಳು ಮತ್ತು ವಾಟರ್ ಫಿಲ್ಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಾಗವಾರ ವ್ಯಾಪ್ತಿಯ ಗೋವಿಂದಪುರದ 17ನೇ ಅಡ್ಡರಸ್ತೆಯ ರಶೀದಿಯಾ ಮಸೀದಿ ಹಿಂಭಾಗದಲ್ಲಿ ಈ ಘಟಕವನ್ನು ನಡೆಸಲಾಗುತ್ತಿತ್ತು.

ಈ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಸ್ಥಳೀಯ ನಾಗರಿಕರು ನೀಡಿದ ದೂರಿನ ಮೇರೆಗೆ ಪಾಲಿಕೆಯ ಉಪ ಆರೋಗ್ಯ ಅಧಿಕಾರಿ (ಪೂರ್ವ) ಮತ್ತು ಹಿರಿಯ ಆರೋಗ್ಯ ಪರಿವೀಕ್ಷಕರ ತಂಡವನ್ನು ರಚಿಸಲಾಗಿತ್ತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT