ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು

Last Updated 12 ಜನವರಿ 2013, 8:46 IST
ಅಕ್ಷರ ಗಾತ್ರ

ಕೋಲಾರ: ನಗರದ ಪ್ರಮುಖ ರಸ್ತೆಗಳಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್‌ಗಳನ್ನು ನಗರಸಭೆ ಸಿಬ್ಬಂದಿ ಶುಕ್ರವಾರ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.

ನಗರದ ಟೇಕಲ್ ರಸ್ತೆಯಿಂದ ಕಾರ್ಯಾಚರಣೆ ಆರಂಭಿಸಿದ ಸಿಬ್ಬಂದಿ ಕ್ಲಾಕ್ ಟವರ್, ಹೊಸ ಬಸ್ ನಿಲ್ದಾಣ ವೃತ್ತ, ಎಂಬಿ ರಸ್ತೆಯಲ್ಲಿ ಸಂಚರಿಸಿ ಸುಮಾರು 50ಕ್ಕೂ ಹೆಚ್ಚು  ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಿದರು.

ಜೆಸಿಬಿ ಸಹಾಯದಲ್ಲಿ ಬೃಹತ್ ಬ್ಯಾನರ್‌ಗಳನ್ನು ಸಿಬ್ಬಂದಿ ತೆರವುಗೊಳಿಸುತ್ತಿದ್ದ ಸಂದರ್ಭ ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿದರು. ನಗರ ಠಾಣೆ ಪಿಎಸ್‌ಐ ಚಂದ್ರಪ್ಪ ಮತ್ತು ಸಿಬ್ಬಂದಿ, ನಗರಸಭೆ ಕಂದಾಯ ಅಧಿಕಾರಿ ಚಲಪತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT