ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುದಾನ ಸದ್ಭಳಕೆಗೆ ಆಗ್ರಹಿಸಿ 17ರಂದು ತಮಟೆ ಚಳುವಳಿ

Last Updated 13 ಡಿಸೆಂಬರ್ 2013, 19:42 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ಬಜೆಟ್‌­ನಲ್ಲಿ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡು­ವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಬೇಡ್ಕರ್‌ ಯುವಸೇನೆ ಇದೇ 17ರಂದು ಪುರ­ಭವನದ ಎದುರು ಬೃಹತ್ ತಮಟೆ ಚಳವಳಿ ಹಮ್ಮಿಕೊಂಡಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ಅಧ್ಯಕ್ಷ ಎಚ್‌. ಕೋದಂಡರಾಮ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಬಜೆಟ್‌­ನಲ್ಲಿ ಮೀಸಲಿಡುವ ಹಣ ಪ್ರತಿ ವರ್ಷವೂ ಅನ್ಯ ಕಾರ್ಯಗಳಿಗೆ ಬಳಕೆ­ಯಾಗುತ್ತಿದೆ. ಕಾರ್ಯ­ಕ್ರಮಗಳ ಅನು­ಷ್ಠಾನದಲ್ಲಿ ಅಧಿಕಾರಿಗಳು ಜವಾಬ್ದಾರಿ ವಹಿಸುತ್ತಿಲ್ಲ. ಬೇಜವಾಬ್ದಾರಿ ಅಧಿಕಾರಿ­ಗಳು ಎಚ್ಚೆತ್ತುಕೊಳ್ಳ­ಬೇಕೆಂಬುದು ಈ ಚಳುವಳಿ ಉದ್ದೇಶ ಎಂದರು.

ಜತೆಗೆ ರಾಜ್ಯದಲ್ಲಿ ನಕಲಿ ಜಾತಿ ಪ್ರಮಾಣಪತ್ರಗಳ ಹಾವಳಿ ಹೆಚ್ಚಾಗು­ತ್ತಿದೆ. ಇದರಿಂದಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸರ್ಕಾರದ ಸವಲತ್ತುಗಳಿಂದ ವಂಚಿತ­ರಾಗುತ್ತಿ­ದ್ದಾರೆ. ಈ ಹಿನ್ನೆಲೆಯಲ್ಲಿ ದಲಿತ ವಿರೋಧಿ ನೀತಿ ಪಾಲಿಸುತ್ತಿರುವ ರಾಜ್ಯ ಸರ್ಕಾರ ಅದನ್ನು ಕೈಬಿಟ್ಟು ಕೂಡಲೇ ಎಲ್ಲ ಬೇಡಿಕೆಗಳನ್ನು ಈಡೇರಿ­ಸಬೇಕು  ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT