ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಅನ್ನದಾನಕ್ಕಿಂತ ವಿದ್ಯಾದಾನ ದೊಡ್ಡದು'

Last Updated 3 ಸೆಪ್ಟೆಂಬರ್ 2013, 6:21 IST
ಅಕ್ಷರ ಗಾತ್ರ

ಹೊಳೆನರಸೀಪುರ: ಅನ್ನದಾನಕ್ಕಿಂತ ವಿದ್ಯಾದಾನ ದೊಡ್ಡದು. ಅನ್ನದಾನದಿಂದ ಆ ಸಮಯದ ಹಸಿವು ನೀಗುತ್ತದೆ. ವಿದ್ಯಾದಾನ ಸದಾಕಾಲ ಜನರನ್ನು ಕಾಪಾಡುತ್ತದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ನುಡಿದರು.

ಸೋಮವಾರ ತಾಲ್ಲೂಕು ಒಕ್ಕಲಿಗರ ಹಿತರಕ್ಷಣಾ ವೇದಿಕೆ ಪಟ್ಟಣದಲ್ಲಿ ಆಯೋಜಿಸಿದ್ದ ಬಾಲಗಂಗಾಧರನಾಥ ಸ್ವಾಮೀಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು.

ಶಾಸಕ ಎಚ್.ಡಿ. ರೇವಣ್ಣ ಮಾತನಾಡಿ ರಾಜ್ಯದಲ್ಲಿ ಹೆಚ್ಚಿನ ವಿದ್ಯಾರ್ಥಿನಿಲಯಗಳನ್ನು ತೆರೆಯಬೇಕು. ಹಾಸನ ಜಿಲ್ಲೆಯಲ್ಲಿ 4 ಸಾವಿರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಊಟ ವಸತಿ ಸೌಲಭ್ಯಗಳನ್ನು ನೀಡಲು ಸಾಧ್ಯವಾಗಿಲ್ಲ ಎಂದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದ ಶಾಂಭವಿ, ಶ್ವೇತಾರಾಣಿ, ಶ್ವೇತಾ, ಚೈತ್ರಾ, ಕುಮಾರಿ, ಪ್ರವೀಣ್‌ಕುಮಾರ್, ಯೋಗೇಶ್, ಶ್ರೀಲೇಖಾ, ನಾಗಮಣಿ, ಪುಷ್ಪಲತಾ, ಸುಶ್ಮಿತಾ ಅವರಿಗೆ ನಗದು ಬಹುಮಾನ ನೀಡಿ ಗೌರವಿಸಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಪುಷ್ಪಾ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಯೋಗೇಶ್, ವಕ್ಕಲಿಗರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ರವಿ, ಎಇಇ ಸುಬ್ಬರಾಯಿಗೌಡ ಇದ್ದರು.

ಪದಾಧಿಕಾರಿಗಳ ಆಯ್ಕೆ
ಹೊಳೆನರಸೀಪುರ: ಭಾರತೀಯ ಕಿಸಾನ್ ಸಂಘ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ಇಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ತಾಲ್ಲೂಕು ಅಧ್ಯಕ್ಷರಾಗಿ ಬೀಚೇನಹಳ್ಳಿ ಚಂದ್ರಶೇಖರ್, ಉಪಾಧ್ಯಕ್ಷರಾಗಿ ಯಳ್ಳೇಶಪುರದ ಎ. ಆರ್. ಜಗದೀಶ್, ಬಸವನಾಯಕನ ಹಳ್ಳಿಯ ಮಗಣ್ಣಗೌಡ, ಕಾರ್ಯಾ ಧ್ಯಕ್ಷರಾಗಿ ಹಂಗರಹಳ್ಳಿ ಕೃಷ್ಣೇಗೌಡ, ಕಾರ್ಯದರ್ಶಿಯಾಗಿ ಬಸವನಾಯಕನಹಳ್ಳಿ ರಾಮಚಂದ್ರ, ಆಯ್ಕೆ ಆಗಿದ್ದಾರೆ ಎಂದು ಜಿಲ್ಲಾ ಉಪಾಧ್ಯಕ್ಷ ಹಳೇಕೋಟೆ ಕುಮಾರ್ ತಿಳಿಸಿದ್ದಾರೆ. ಜಿಲ್ಲಾ ಸಂಚಾಲಕ ಎಂ. ರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT