ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: 8 ಜನ ಸಾವು

Last Updated 15 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಜೇವರ್ಗಿ (ಗುಲ್ಬರ್ಗ ಜಿಲ್ಲೆ): ಪಂಕ್ಚರ್ ಆಗಿ ರಸ್ತೆ ಬದಿಯಲ್ಲಿ ನಿಂತಿದ್ದ ಕ್ರೂಜರ್ ವಾಹನಕ್ಕೆ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಕ್ರೂಜರ್‌ನಲ್ಲಿದ್ದ ಎಂಟು ಜನರು ಸ್ಥಳದಲ್ಲಿಯೇ ಮೃತಪಟ್ಟು 9 ಜನ ಗಂಭೀರವಾಗಿ ಗಾಯಗೊಂಡ ಘಟನೆ ಬೀದರ್- ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯ ಅವರಾದ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.

ಮೃತರೆಲ್ನ್ ಅಫಜಲಪುರ ತಾಲ್ಲೂಕಿನ ಬಿದನೂರ ಗ್ರಾಮದವರು. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಇವರೆಲ್ಲ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆಂದು ಯಾದಗಿರಿಗೆ ತೆರಳಿ ಹಿಂತಿರುಗುತ್ತಿದ್ದಾಗ  ಈ ದುರ್ಘಟನೆ ನಡೆದಿದೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT