ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪೌಷ್ಟಿಕತೆ ನಿವಾರಣೆಗೆ 4 ತಾಲ್ಲೂಕಿನಲ್ಲಿ ಹೊಸ ಅಂಗನವಾಡಿ ಕೇಂದ್ರ

Last Updated 13 ಡಿಸೆಂಬರ್ 2012, 19:40 IST
ಅಕ್ಷರ ಗಾತ್ರ

ಬೆಂಗಳೂರು: ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸುವ ಉದ್ದೇಶದಿಂದ ನಾಲ್ಕು ತಾಲ್ಲೂಕುಗಳಲ್ಲಿ ಪ್ರಾಯೋಗಿಕವಾಗಿ ಸುಸಜ್ಜಿತ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್‌ಗೆ ತಿಳಿಸಿದೆ.

ಸರ್ಕಾರದ ಪರ ಹಾಜರಾದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕೆ.ಎಂ. ನಟರಾಜ್, `ಪ್ರತಿ ಅಂಗನವಾಡಿಗೆ 10 ಲಕ್ಷ ರೂಪಾಯಿ ವಿನಿಯೋಗಿಸಲಾಗುತ್ತದೆ. ಬೀದರ್, ದೇವದುರ್ಗ, ರಾಯಚೂರು ಹಾಗೂ ಮೈಸೂರು ತಾಲ್ಲೂಕುಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಲಾಗಿದೆ. ಇದರ ಹೊರತಾಗಿ, ದೇವದುರ್ಗ ತಾಲ್ಲೂಕಿಗೆ 10 ಕೋಟಿ ರೂಪಾಯಿ ಮೊತ್ತದ ವಿಶೇಷ ಯೋಜನೆ ರೂಪಿಸಲಾಗಿದೆ' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT