ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪೌಷ್ಟಿಕತೆಯಿಂದ ಮಕ್ಕಳ ಸಾವು: ಆತಂಕ

Last Updated 3 ಅಕ್ಟೋಬರ್ 2012, 4:35 IST
ಅಕ್ಷರ ಗಾತ್ರ

ಬಳ್ಳಾರಿ: ಪೌಷ್ಟಿಕತೆಯ ಕೊರತೆಯಿಂದ ದೇಶದಲ್ಲಿ ನಿತ್ಯ 228 ಮಕ್ಕಳು ಮೃತಪಡುತ್ತಿದ್ದಾರೆ ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ವರಲಕ್ಷ್ಮಿ ಆತಂಕ ವ್ಯಕ್ತಪಡಿಸಿದರು.
ನಗರದಲ್ಲಿ ಇತ್ತೀಚೆಗೆ ನಡೆದ ಅಂಗನವಾಡಿ ನೌಕರರ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಅಪೌಷ್ಟಿಕ ಆಹಾರದ ಪ್ರಮಾಣ ಹೆಚ್ಚಾಗುತ್ತಿದೆ ಎಂದು ವಿಶ್ವ ಕಾರ್ಮಿಕ ಸಂಘಟನೆ (ಐಎಲ್‌ಒ) ವರದಿ ತಿಳಿಸಿದೆ. ಅಪೌಷ್ಟಿಕತೆಗೆ ಬಡತನವೇ  ಪ್ರಮುಖ ಕಾರಣವಾಗಿದೆ. ಜನರಲ್ಲಿ ಕೊಳ್ಳುವ ಶಕ್ತಿ ಇಲ್ಲದ್ದರಿಂದ ಸಾಕಷ್ಟು ಸಮಸ್ಯೆ ಎದುರಾಗಿದೆ. ಬೆಲೆ ಏರಿಕೆಯಿಂದಲೂ ಜನ ಸಾಮಾನ್ಯರು ತತ್ತರಿಸುವಂತಾಗಿದೆ  ಎಂದು ಅವರು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಸಂಘಟಿತ ಕಾರ್ಮಿಕರನ್ನು ಕಡೆಗಣಿಸು ತ್ತಿವೆ. ಬಾಣಂತಿಯರು ಸಮರ್ಪಕ ಪೌಷ್ಟಿಕಾಂಶದ ಕೊರತಯಿಂದ  ಮೃತಪಡುತ್ತಿದ್ದಾರೆ. ದೇಶದಲ್ಲಿ ಮಾನವ ಸಂಪನ್ಮೂಲದ ಸದ್ಬಳಕೆ ಮಾಡಿಕೊಳ್ಳುವಲ್ಲಿ ಆಡಳಿತ ಪಕ್ಷಗಳು ವಿಫಲವಾಗಿವೆ ಎಂದು ಅವರು ಆರೋಪಿಸಿದರು.

ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಕೆ. ನಾಗರತ್ನಮ್ಮ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಆರ್.ಎಸ್. ಬಸವರಾಜ್, ಎಸ್. ಪನ್ನರಾಜ್, ಜೆ. ಸತ್ಯಬಾಬು, ಕೆ. ಕೊಟೇಶ್ವರರಾವ್, ಲೀಲಾವತಿ, ಸೌಭಾಗ್ಯ, ಡಾ.ಅರವಿಂದ್ ಪಾಟೀಲ್, ಟಿ.ಜಿ. ವಿಠ್ಠಲ್, ಎರ‌್ರೆಮ್ಮ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಅಂಗನವಾಡಿ ಕಾರ್ಯಕರ್ತೆಯರು ನಗರದಲ್ಲಿ ರ‌್ಯಾಲಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT