ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕಾಮಗಾರಿಗಳು ಕುಂಠಿತ

Last Updated 20 ಜುಲೈ 2012, 19:30 IST
ಅಕ್ಷರ ಗಾತ್ರ

ನೆಲಮಂಗಲ: ತಾಲ್ಲೂಕಿನ ಅರಿಶಿನಕುಂಟೆಯ ಆದರ್ಶನಗರದ ರಸ್ತೆ ಡಾಂಬರೀಕರಣದ ಕಾಮಗಾರಿಯನ್ನು ಮತ್ತು ಶಿಥಲಗೊಂಡಿರುವ ವಾಟರ್ ಟ್ಯಾಂಕ್‌ನ್ನು ಶಾಸಕರ ನಿಧಿಯಿಂದ ನಿರ್ಮಿಸಲು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ತಿಮ್ಮರಾಯಪ್ಪ ಕೇಳಿಕೊಂಡರು.

ಅರಿಶಿನಕುಂಟೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ಮಾತನಾಡಿದ ಅವರು ಸಾರ್ವಜನಿಕರ ಪರವಾಗಿ ಗ್ರಾಮಕ್ಕೆ ಅಗತ್ಯವಾಗಿ ಆಗಬೇಕಾದ ಅಭಿವೃದ್ದಿ ಕಾರ್ಯಗಳ ಬಗ್ಗೆ ಶಾಸಕ ಎಂ.ವಿ.ನಾಗರಾಜು ಅವರ ಗಮನಸೆಳೆದರು.

`ರಾಜಕೀಯ ಗೊಂದಲಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಅಧಿಕಾರಿಗಳು ಗ್ರಾಮಸಭೆಗೆ ಹಾಜರಾಗುತ್ತಿಲ್ಲ ಅಂತಹವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು~ ಎಂದು ಶಾಸಕ ಎಂ.ವಿ.ನಾಗರಾಜು ತಿಳಿಸಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಟಿ.ವಿ.ಶುಭಾ ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಪದ್ಮನಾಭ್ ಪಂಚಾಯಿತಿಗೆ ಮಂಜೂರಾದ ಅನುದಾನ ಮತ್ತು ಕೈಗೊಂಡ ಕಾರ್ಯಗಳ ಬಗ್ಗೆ ವಿವರ ನೀಡಿದರು.

ಕೃಷಿ, ತೋಟಗಾರಿಕೆ, ರೇಷ್ಮೆ, ಆರೋಗ್ಯ, ಮಕ್ಕಳ ಕಲ್ಯಾಣ ಇಲಾಖೆಯಿಂದ ದೊರೆಯಬಹುದಾದ ಸೌಲಭ್ಯಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ವಿವರ ನೀಡಿದರು. ಇದೇ ಸಂದರ್ಭದಲ್ಲಿ ಯಶಸ್ವಿನಿ ಬಾಂಡ್‌ಗಳನ್ನು ಆಯ್ದ ಫಲಾನುಭವಿಗಳಿಗೆ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT