ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕಾಮಗಾರಿಗೆ ಚಾಲನೆ

Last Updated 9 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಯಲಹಂಕ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯೋಜನಾ ವಿಭಾಗದ ಮುಂದುವರಿದ ಕಾಮಗಾರಿಗಳ ಅನುದಾನದಡಿ ರೂ 5 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಕೋಗಿಲು ಮುಖ್ಯರಸ್ತೆಯಲ್ಲಿ ಚಾಲನೆ ನೀಡಿದರು.

ವಾರ್ಡ್ ಸಂಖ್ಯೆ-1ರ ವ್ಯಾಪ್ತಿಯ ಕೋಗಿಲು ಮುಖ್ಯರಸ್ತೆಯಲ್ಲಿ ರೂ 56 ಲಕ್ಷ ವೆಚ್ಚದಲ್ಲಿ ಪಾದಚಾರಿ ರಸ್ತೆ ಅಭಿವೃದ್ಧಿ, ಮಾರುತಿ ನಗರದಲ್ಲಿ ರೂ 99 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ರೂ 2.50 ಕೋಟಿ ವೆಚ್ಚದಲ್ಲಿ ನಿಟ್ಟೆ ಕಾಲೇಜು ರಸ್ತೆ ಅಭಿವೃದ್ಧಿ, ವಾರ್ಡ್ ಸಂಖ್ಯೆ-3ರ ವ್ಯಾಪ್ತಿಯ ಉಪನಗರ 4ನೇ ಹಂತದ ಶಿರ್ಕೆ ಬಹುಮಹಡಿ ಕಟ್ಟಡಗಳ ಪ್ರದೇಶದಲ್ಲಿ ರೂ 95 ಲಕ್ಷ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಕಾಮಗಾರಿ, ವಾರ್ಡ್ ಸಂಖ್ಯೆ-4ರ ವ್ಯಾಪ್ತಿಯ ಅಳ್ಳಾಳಸಂದ್ರದಲ್ಲಿ ಬೃಹತ್ ನೀರುಗಾಲುವೆಗೆ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು. ಬಿಬಿಎಂಪಿ ಸದಸ್ಯರಾದ ಡಾ.ಗೀತಾಶಶಿಕುಮಾರ್, ಎಂ.ಮುನಿರಾಜು, ವೈ.ಎನ್.ಅಶ್ವತ್ಥ್, ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಹ್ಲಾದ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಆಂಜಿನಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT