ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕಾರ್ಯಗಳತ್ತ ಗಮನ ನೀಡಿ

Last Updated 9 ಜೂನ್ 2011, 9:10 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ತಾಲ್ಲೂಕಿನಾದ್ಯಂತ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳತ್ತ ಅಧಿಕಾರಿಗಳು ಹೆಚ್ಚು ಒತ್ತು ಕೊಟ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸಬೇಕೆಂದು ಚಿಕ್ಕಮಗಳೂರು ತಾ.ಪಂ. ಅಧ್ಯಕ್ಷ ಕನಕರಾಜ್ ಅರಸ್ ಸೂಚಿಸಿದರು.

ಇಲ್ಲಿನ ತಾ.ಪಂ .ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಕಾರ್ಯಕ್ರಮ ನಡೆಯುತ್ತಿರುವ ಬಗ್ಗೆ ಚುನಾಯಿತ ಪ್ರತಿನಿಧಿಗಳಿಗೆ ಸಂಪೂರ್ಣ ಮಾಹಿತಿ ನೀಡುವಂತೆ ಹೇಳಿದ ಅವರು, ತಾ.ಪಂ. ಸಭೆಯಲ್ಲಿ ಅನುಮೋದಿಸಿದ ಉದ್ಯೋಗ ಖಾತರಿ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದೊಂದಿಗೆ ಶೀಘ್ರದಲ್ಲಿ ನಿರ್ವಹಿಸಲು ಕಾರ್ಯ ಪ್ರವೃತ್ತರಾಗಬೇಕು ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿ ತಾ.ಪಂ.ಗೆ ಪ್ರತಿ ವರ್ಷ 1 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದ ಅವರು, ತಾಲ್ಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸೂಕ್ತ ಬಹುಮಾನ ನೀಡುವ ಜೊತೆಗೆ ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದರು.

ಸಭೆಯಲ್ಲಿ ರೂ.52.84 ಲಕ್ಷದ ಕ್ರಿಯಾ ಯೋಜನೆ ತಯಾರಿಸಲಾಗಿದೆ ಎಂದ ಅವರು, ತಾಲ್ಲೂಕಿನಲ್ಲಿ ವಿತರಿಸಿರುವ ಬಿಪಿಎಲ್ ಕಾರ್ಡು ಸರ್ವೆ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರ ಬಿಟ್ಟು ಹೋಗಿರುವ ಅರ್ಹ ಫಲಾನುಭವಿಗಳಿಗೆ ಕಾರ್ಡು ವಿತರಿಸಲಾಗುವದು ಎಂದು ತಿಳಿಸಿದರು.

ಸಭೆಯಲ್ಲಿ ತಾ.ಪಂ ಉಪಾಧ್ಯಕ್ಷ ಯೋಗಾನಂದ್, ಕಾರ್ಯ ನಿರ್ವಹಣಾಧಿಕಾರಿ ಮೃತ್ಯುಂಜಯ, ತಾ.ಪಂ ಸದಸ್ಯರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT