ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಗಾಗಿ ಮುದ್ನಾಳ ಬೆಂಬಲಿಸಲು ಸಲಹೆ

Last Updated 6 ಡಿಸೆಂಬರ್ 2012, 6:58 IST
ಅಕ್ಷರ ಗಾತ್ರ

ಯಾದಗಿರಿ: ಬರುವ ದಿನಗಳಲ್ಲಿ ಗುರುಮಠಕಲ್ ಮತಕ್ಷೇತ್ರದ ಅಭಿವೃದ್ಧಿಗಾಗಿ ಮುಖಂಡರಾದ ವೆಂಕಟರಡ್ಡಿ ಮುದ್ನಾಳ ಅವರನ್ನು ಅಭಿಮಾನಿಗಳು ಬೆಂಬಲಿಸಿ, ಚುನಾವಣೆಯಲ್ಲಿ ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಮರಡ್ಡಿಗೌಡ ಕ್ಯಾಸಪನಳ್ಳಿ ಮನವಿ ಮಾಡಿದರು.

ಬುಧವಾರ ನಗರದಲ್ಲಿ ಕರೆದಿದ್ದ ಮುದ್ನಾಳ ಅಭಿಮಾನಿಗಳ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು.
ದಿ. ವಿಶ್ವನಾಥರಡ್ಡಿ ಮುದ್ನಾಳ ಅವರು ಭಾಗದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರಂತೆ ಅವರ ಪುತ್ರನೂ ಜನ ಸಾಮಾನ್ಯರ ಹಾಗೂ ಅಭಿಮಾನಿಗಳ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಾ ಬಂದಿದ್ದಾರೆ. ಅವರ ಕುಟುಂಬದೊಂದಿಗೆ 40 ವರ್ಷ ರಾಜಕೀಯ ಸಂಬಂಧವಿದೆ. ನಂಬಿದವರಿಗೆ ದ್ರೋಹ ಮಾಡಿಲ್ಲ. ಅವರನ್ನು ಬೆಂಬಲಿಸುವ ಮೂಲಕ ತಮ್ಮ ಶಕ್ತಿ ಪ್ರದರ್ಶಿಸಬೇಕು ಎಂದು ಹೇಳಿದರು.

ಮುಖಂಡ ವೆಂಕಟರಡ್ಡಿ ಮುದ್ನಾಳ ಮಾತನಾಡಿ, ಮತಕ್ಷೇತ್ರದಲ್ಲಿ ಕಾರ್ಯಕರ್ತರಿಗೆ ಹಾಗೂ ಜನತೆಗೆ ತೊಂದರೆಯಾದರೆ ಅವರಿಗಾಗಿ ಹಗಲಿರುಳು ಕೆಲಸ ಮಾಡಿದ್ದೇನೆ. ನನ್ನ ಮತ್ತು ಸಹೋದರ ಡಾ. ವೀರಬಸವಂತರಡ್ಡಿ ಮುದ್ನಾಳರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾವೆಲ್ಲರೂ ಒಂದೇ. ಬರುವ ಚುನಾವಣೆಯಲ್ಲಿ ಜನರ ಆಶೀರ್ವಾದದಿಂದ ಇಬ್ಬರು ಶಾಸಕರಾಗಿ ಆಯ್ಕೆಯಾಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ಬಾಬುರಾವ ಚಿಂಚನಸೂರ ಅವರ ಭ್ರಷ್ಟಾಚಾರದಿಂದ ಮತಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳು ಜನರನ್ನು ಕಾಡುತ್ತಿವೆ. ಬರುವ ದಿನಗಳಲ್ಲಿ ರೈತರ ಬಹುದಿನದ ಕನಸಾದ ಭೀಮಾನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಬಿಜೆಪಿ ನಾಯಕರ ನಿರ್ಲಕ್ಷ ಧೋರಣೆ ಖಂಡಿಸಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ಬೆಂಬಲಿಗರ ಸಲಹೆ ಮೇರೆಗೆ ಬೆಂಬಲಿಗರ ಜೊತೆಗೂಡಿ ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದು, ಕೆಜೆಪಿ ಪಕ್ಷವನ್ನು ಸೇರುತ್ತಿರುವುದಾಗಿ ಭಾವುಕರಾಗಿ ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ನಾಗರತ್ನ ಕುಪ್ಪಿ ಹಾಗೂ ಶರಣಗೌಡ ಬಾಡಿಯಾಳ ಮಾತನಾಡಿದರು. ಎಪಿಎಂಸಿ ಅಧ್ಯಕ್ಷ ಭೀಮಣಗೌಡ ಕ್ಯಾತನಾಳ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಖಂಡಪ್ಪ ದಾಸನ, ಸುನೀತಾ ಚವ್ಹಾಣ, ಸುರೇಶ ಬಸವಂತಪೂರ, ವೆಂಕಟಪ್ಪ ಗುರುಮಠಕಲ್, ಸೋಮಣ್ಣ ಚಟಗೇರಿ, ಸಿದ್ಧಪ್ಪ ಹೊಟ್ಟಿ, ಅಯ್ಯಣ್ಣ ಹುಂಡೇಕಾರ ಮುಂತಾದವರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT