ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಅಭಿವೃದ್ಧಿಗೆ ವಿಜ್ಞಾನದ ಕೊಡುಗೆ ಅಪಾರ'

Last Updated 8 ಡಿಸೆಂಬರ್ 2012, 9:27 IST
ಅಕ್ಷರ ಗಾತ್ರ

ಹಾನಗಲ್: `ಮಾನವನ ಪ್ರತಿ ಹಂತದ ಬೆಳವಣಿಗೆಗೆ ವಿಜ್ಞಾನ ಕಾರಣವಾಗಿದ್ದು, ಪ್ರಸ್ತುತದ ಅತ್ಯಾಧುನಿಕ ಯುಗದ ಅಭಿವೃದ್ಧಿಗೆ ವೈಜ್ಞಾನಿಕ ಆವಿಷ್ಕಾರಗಳ ಕೊಡುಗೆ ಮಹತ್ತರವಾಗಿದೆ' ಎಂದು ಜನತಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ.ಎಸ್.ಬಳ್ಳಾರಿ ನುಡಿದರು.
ಶುಕ್ರವಾರ ಇಲ್ಲಿನ ಎನ್.ಸಿ.ಜೆ.ಸಿ ಪ್ರೌಢಶಾಲೆಯಲ್ಲಿ ನಡೆದ ಒಂದು ದಿನದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನದ ಮುಖ್ಯ ಅತಿಥಿಯಾಗಿ ಮಾತನಾಡಿದರು. 

ಎಲ್ಲ ಕ್ಷೇತ್ರಗಳಲ್ಲಿಯೂ ವಿಜ್ಞಾನದ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುತ್ತಿದ್ದು,  ವಿದ್ಯಾರ್ಥಿಗಳು ವೈಜ್ಞಾನಿಕ ವಿದ್ವತ್ತು ಬೆಳೆಸಿಕೊಳ್ಳಲು ಶಿಕ್ಷಕರು ಸಮರ್ಥವಾಗಿ ಮಾರ್ಗದರ್ಶನ ನೀಡುವ ಅಗತ್ಯತೆ ಇದೆ. ಚಿಕಿತ್ಸಕ ಬುದ್ಧಿ ಹೊಂದಿರುವ ಪ್ರಸ್ತುತ ಪೀಳಿಗೆಯ ಮಕ್ಕಳು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಬೆಳಸಿಕೊಳುತ್ತಿದ್ದಾರೆ. ಮೊಬೈಲ್, ಅಂತರ್ಜಾಲಗಳು ವಿದ್ಯಾರ್ಥಿಗಳ ವಿಕಾಸಕ್ಕೆ ಬಳಕೆಯಾಗಬೇಕು ಎಂದ ಅವರು, ವೈಜ್ಞಾನಿಕ ವಿಚಾರಗಳ ಪ್ರೋತ್ಸಾಹಕ್ಕೆ ಸರ್ಕಾರ ಯೋಜನೆಗಳನ್ನು ರೂಪಿಸಬೇಕಾದ ಅವಶ್ಯಕತೆ ಇದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಪಂ ಉಪಾಧ್ಯಕ್ಷೆ ಗೀತಾ ಅಂಕಸಖಾನಿ, ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಗಮನ ನೀಡುವ ಮೂಲಕ ವೈಜ್ಞಾನಿಕ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಸಲಹೆ ನೀಡಿದರು. ಪ್ರಾಸ್ತಾವಿಕ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ಸಾಲಿಮಠ, ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಮತ್ತು ವೈಜ್ಞಾನಿಕ ಆವಿಷ್ಕಾರಗಳಲ್ಲಿ ಪಾಲ್ಗೊಳ್ಳಲು  ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಪರಸಭೆ ಅಧ್ಯಕ್ಷೆ ಹಸಿನಾಬಿ ನಾಯ್ಕನವರ, ಮಾಜಿ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ, ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಪಿ.ವೈ.ಗುಡಗುಡಿ ಭಾಗವಹಿಸಿದ್ದರು. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತಾಲ್ಲೂಕಿನ 40 ಶಾಲೆಗಳು ಪಾಲ್ಗೊಂಡಿದ್ದವು. ಕೈಗಾರಿಕೆ, ನೈಸರ್ಗಿಕ ಸಂಪನ್ಮೂಲಗಳು, ಸಾರಿಗೆ ಸಂಪರ್ಕ, ಮಾಹಿತಿ ತಂತ್ರಜ್ಞಾನ, ಸಮುದಾಯ ಆರೋಗ್ಯ ಕೇಂದ್ರ, ಗಣಿತ ಮಾದರಿ ವಿಭಾಗದ ಪ್ರದರ್ಶನದಲ್ಲಿ 56 ವಿವಿಧ ವಿಜ್ಞಾನ ಮಾದರಿಗಳು ಪ್ರದರ್ಶಿಸಲ್ಪಟ್ಟಿವು.

ಪ್ರದರ್ಶನದಲ್ಲಿ ಪ್ರಥಮ ಮತ್ತು ದ್ವಿತಿಯ ಬಹುಮಾನ ಪಡೆದ ಮಾದರಿಗಳು ಜಿಲ್ಲಾ ಮಟ್ಟದ ಪ್ರದರ್ಶನಕ್ಕೆ ಆಯ್ಕೆಯಾಗುತ್ತವೆ.  ಶಿಕ್ಷಕರಿಗಾಗಿ  ವಿಜ್ಞಾನ ಮಾದರಿ ಸ್ಪರ್ಧೆಯನ್ನು ಇದೇ ಸಂದರ್ಭದಲ್ಲಿ ಏರ್ಪಡಿಸಿದ್ದು ವಿಷೇಶವಾಗಿತ್ತು. ಈ ವಿಜ್ಞಾನ ಪ್ರದರ್ಶನವನ್ನು ಹಾನಗಲ್ ನಗರದ ಎಲ್ಲ ಶಾಲೆಗಳ ವಿಧ್ಯಾರ್ಥಿಗಳು ವೀಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT