ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಾವಾಸ್ಯೆಗೆ ಲಕ್ಷ ದೀಪೋತ್ಸವದ ಮೆರುಗು...

Last Updated 4 ಡಿಸೆಂಬರ್ 2013, 9:49 IST
ಅಕ್ಷರ ಗಾತ್ರ

ಆನೇಕಲ್‌: ಪಟ್ಟಣದಲ್ಲಿ ಕಾರ್ತೀಕ ಅಮಾವಸ್ಯೆ ಪ್ರಯುಕ್ತ ವಿವಿಧ ದೇವಾಲಯಗಳಲ್ಲಿ ವಿಶೇಷ ಕಾರ್ಯ ಕ್ರಮಗಳು ವಿಜೃಂಭಣೆಯಿಂದ ನಡೆದವು.
ಕಂಬದ ಗಣಪತಿ ಹಾಗೂ ಅಮೃತ ಮಲ್ಲಿ ಕಾರ್ಜುನ ಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಏರ್ಪಡಿಸಲಾಗಿತ್ತು.
ಲಕ್ಷ ದೀಪೋತ್ಸವ ಹಮ್ಮಿಕೊಳ್ಳ ಲಾಗಿತ್ತು.

ಸಹಸ್ರಾರು ಭಕ್ತರು ಸಾಲಿನಲ್ಲಿ ಬಂದು ಸಾಲು ದೀಪಗಳನ್ನು ಹಚ್ಚಿ ದೇವರ ದರ್ಶನ ಪಡೆದು ಸಂಭ್ರಮಿಸಿದರು.

ಥಳಿ ರಸ್ತೆಯಲ್ಲಿರುವ ಬಸವೇಶ್ವರ ದೇವಾಲಯದಲ್ಲಿ ಕಾರ್ತೀಕ ಅಮಾವಸ್ಯೆ ಪ್ರಯುಕ್ತ ಸ್ವಾಮಿಗೆ ಅಭಿಷೇಕ, ಪೂಜೆ, ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.

ದೊಡ್ಡಕೆರೆ ಬಾಗಿಲಿನ ಪಟ್ಟಾಭಿರಾಮ ದೇವಾಲಯದಲ್ಲಿ ಕಾರ್ತೀಕ ಅಮಾವಸ್ಯೆ ಪ್ರಯುಕ್ತ ಲಕ್ಷ ದೀಪೋತ್ಸವ ಏರ್ಪಡಿಸಲಾಗಿತ್ತು.

ಬನ್ನೇರುಘಟ್ಟ ರಸ್ತೆಯ ಶನಿಮಹಾತ್ಮ ದೇವಾಲಯ ಹಾಗೂ ಚಿನ್ನಪ್ಪ ಸ್ವಾಮಿ ದೇವಾಲಯದಲ್ಲಿ ಕಡಲೆ ಕಾಯಿ ಪರಿಷೆ ನಡೆಯಿತು. ಭಕ್ತರು ಕಡಲೆಕಾಯಿಯನ್ನು ದೇವಾಲಯ ಗೋಪುರಕ್ಕೆ ಎಸೆಯುವ ಮೂಲಕ ಭಕ್ತಿಯನ್ನು ಸಮರ್ಪಿಸುತ್ತಿದ್ದ ದೃಶ್ಯ ಕಂಡುಬಂದಿತು.

ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT