ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ದಲೈ ಲಾಮ ಸೋದರನ ಪುತ್ರ ಸಾವು

Last Updated 15 ಫೆಬ್ರುವರಿ 2011, 16:40 IST
ಅಕ್ಷರ ಗಾತ್ರ

ಹ್ಯೂಸ್ಟನ್ (ಪಿಟಿಐ): ಟಿಬೆಟನ್ ಧಾರ್ಮಿಕ ಗುರು ದಲೈ ಲಾಮ ಅವರ ಹಿರಿಯ ಸೋದರನ ಪುತ್ರ ಜಿಗ್ಮೆ ನೊರ್ಬೂ (45) ಅಮೆರಿಕದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಟಿಬೆಟನ್ನರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಶ್ವಕ್ಕೆ ಮನದಟ್ಟು ಮಾಡಿಕೊಡುವ ಉದ್ದೇಶದಿಂದ ಫ್ಲೋರಿಡಾದಲ್ಲಿ ಸೋಮವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಕಾಲ್ನಡಿಗೆ ವೇಳೆ ಹೆದ್ದಾರಿಯಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಜಿಗ್ಮೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಜಗತ್ತಿನ ಗಮನ ಸೆಳೆಯಲು ಟಿಬೆಟಿನ ಈ ಹೋರಾಟಗಾರ ಕಳೆದ ಹಲವು ವರ್ಷಗಳಿಂದ ವಿಶ್ವದಾದ್ಯಂತ ಅನೇಕ ಸಲ ನಡಿಗೆ ಕೈಗೊಂಡಿದ್ದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT