ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೇಠಿ: ನಾಮಪತ್ರ ಸಲ್ಲಿಸಿದ ಸ್ಮೃತಿ ಇರಾನಿ

Last Updated 16 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಅಮೇಠಿ (ಪಿಟಿಐ): ‘ಈ ಬಾರಿ ರಾಹುಲ್‌ ಗಾಂಧಿ ಅವರನ್ನು ಸೋಲಿಸಲು ಜನ ನಿರ್ಧರಿಸಿ­ದ್ದಾರೆ. ಅಮೇಠಿ­ಯಲ್ಲಿ ಇತಿಹಾಸ ರಚನೆಯಾಗಲಿದೆ’ ಎಂದು ಅಮೇಠಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ಭವಿಷ್ಯ ನುಡಿದಿದ್ದಾರೆ.

ಬುಧವಾರ ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ‘ರಾಹುಲ್‌ ಈ ದೇಶದ ಪ್ರಧಾನಿ ಆಗುವುದು ಸಾಧ್ಯವಿಲ್ಲ. ಅವರ ಪಕ್ಷದ ಸದಸ್ಯರಿಗೇ ಅವರ ಮೇಲೆ ವಿಶ್ವಾಸವಿಲ್ಲ’ ಎಂದು ತಮ್ಮ ಪ್ರಬಲ ಎದುರಾಳಿ  ರಾಹುಲ್‌ ಗಾಂಧಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಕುಮಾರ್ ವಿಶ್ವಾಸ್‌ ವಿರುದ್ಧ ಕಿಡಿ: ‘ಎಎಪಿ ಅಭ್ಯರ್ಥಿ ಕುಮಾರ್‌ ವಿಶ್ವಾಸ್‌ ಅವರಿಗೆ ಸ್ತ್ರೀಯರೊಂದಿಗೆ ಹೇಗೆ ವರ್ತಿಸಬೇಕು ಎಂಬುದು ತಿಳಿದಿಲ್ಲ. ನಾನು ಅವರಿಂದ ಏನನ್ನೂ ನಿರೀಕ್ಷಿಸುವುದಿಲ್ಲ’ ಎಂದು ಸ್ಮೃತಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT