ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೇಠಿಯಲ್ಲಿ ಪ್ರಿಯಾಂಕಾ ಪ್ರಚಾರ

Last Updated 10 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪಕ್ಷದಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಒತ್ತಡ ಹೆಚ್ಚುತ್ತಿರುವ ನಡುವೆಯೇ, ಪ್ರಿಯಾಂಕಾ ವಾಧ್ರಾ ಅವರು ಅಮೇಠಿ ಮತ್ತು ರಾಯ್‌ಬರೇಲಿ ಲೋಕಸಭೆ ಕ್ಷೇತ್ರ­ಗಳಲ್ಲಿ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ.

ಇಲ್ಲಿನ ಲೋಧಿ ಎಸ್ಟೇಟ್‌ ಮತಗಟ್ಟೆ­ಯಲ್ಲಿ ಗುರುವಾರ ಮತ ಚಲಾಯಿಸಿದ ನಂತರ ಮಾತನಾಡಿದ ಪ್ರಿಯಾಂಕಾ, ‘ನಾನು ರಾಯ್‌ಬರೇಲಿ ಮತ್ತು ಅಮೇಠಿ­ಯಲ್ಲಿ ಪ್ರಚಾರದಲ್ಲಿ ಭಾಗವಹಿಸ­-­ಲಿದ್ದೇನೆ’ ಎಂದು ತಿಳಿಸಿದರು.  ಪತಿ ರಾಬರ್ಟ್‌ ವಾಧ್ರಾ ಅವರ ಜತೆಯಲ್ಲಿದ್ದರು.

ರಾಯ್‌ಬರೇಲಿ ಕ್ಷೇತ್ರದಲ್ಲಿ ಪ್ರಿಯಾಂಕಾ  ತಾಯಿ, ಕಾಂಗ್ರೆಸ್‌ ಅಧ್ಯಕ್ಷೆ  ಸೋನಿಯಾ ಗಾಂಧಿ ಹಾಗೂ ಅಮೇಠಿಯಲ್ಲಿ ಸಹೋದರ, ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT