ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ಅಧಿಕಾರಿ ಇನ್ನೂ ನಾಪತ್ತೆ

ಲೈಂಗಿಕ ಕಿರುಕುಳ ಪ್ರಕರಣ
Last Updated 12 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬಾಗಲಕೋಟೆ: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದು­ರಿಸುತ್ತಿರುವ ಬಾಗಲಕೋಟೆ ಸಾಮಾಜಿಕ ಅರಣ್ಯ ವಿಭಾಗದ ಉಪ ಸಂರಕ್ಷಣಾ­ಧಿಕಾರಿ (ಡಿಎಫ್‌ಒ) ಎಚ್‌.ಬಿ.ನಾಯಕ ಇದುವರೆಗೂ ಪತ್ತೆಯಾಗಿಲ್ಲ.

ಡಿಎಫ್‌ಒ ಅವರ ಮೊಬೈಲ್‌ ಪೋನ್‌ ಸ್ವಿಚ್‌ ಆಫ್‌ ಆಗಿದ್ದು, ಗುರುವಾರ ಕಚೇರಿಗೂ ಆಗಮಿಸಿರಲಿಲ್ಲ. ಬೆಳಗಾವಿಗೆ ಹೋಗಿರುವ ಸಾಧ್ಯತೆ ಇರುವುದರಿಂದ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಇಬ್ಬರು ಪೊಲೀಸರನ್ನು ಅಲ್ಲಿಗೆ ಕಳುಹಿಸಲಾ­ಗಿದೆ ಎಂದು ನವ­ನಗರ ಪೊಲೀಸ್‌ ಠಾಣೆ ಸಬ್‌ ಇನ್ ಸ್ಪೆಕ್ಟರ್  ತಿಳಿಸಿದರು.

ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಯು ಪೊಲೀಸರಿಗೆ ನೀಡಿರುವ ಅಶ್ಲೀಲ ಸಂಭಾಷಣೆಯ ಧ್ವನಿ ಮುದ್ರಿಕೆಯ ನೈಜತೆಯನ್ನು ದೃಢಪಡಿಸಿಕೊಳ್ಳಲು ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾ­ಗಿದೆ ಎಂದು ತಿಳಿದು­ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT