ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ಅನುದಾನದಲ್ಲಿ ಕಡಿತ ಬೇಡ: ಕೇಂದ್ರ

Last Updated 26 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅರಣ್ಯ ಯೋಜನೆಯ ಕಾರ್ಯಕ್ರಮಗಳಿಗಾಗಿ ನಿಗದಿಪಡಿಸಿರುವ ಮೊತ್ತವನ್ನು ಕಡಿತಗೊಳಿಸದಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಮನವಿ ಮಾಡಿದೆ.

ರಾಜ್ಯ ಸರ್ಕಾರಗಳು ಅರಣ್ಯ ಬೆಳೆಸುವ ಯೋಜನೆಯನ್ನು ಬಿಟ್ಟು ಇತರ ಹಲವು ಕಾರ್ಯಕ್ರಮಗಳಿಗಾಗಿ `ಅರಣ್ಯ ಅಭಿವೃದ್ಧಿ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ~ದಿಂದ (ಸಿಎಎಂಪಿಎ) ಪದೇ ಪದೇ ಹಣ ಕೇಳುತ್ತಿದ್ದರಿಂದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ನಿರ್ಧರಿಸಿರುವುದಾಗಿ ಪರಿಸರ ಸಚಿವೆ ಜಯಂತಿ ನಟರಾಜನ್ ಹೇಳಿದ್ದಾರೆ.

ಬುಧವಾರ ನಡೆದ ಪ್ರಾಧಿಕಾರದ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನಟರಾಜನ್, ಸಿಎಎಂಪಿಎ ಮೊತ್ತದ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ರಾಜ್ಯದ ಪಾಲನ್ನು ಕಡಿತಗೊಳಿಸಿವೆ, ಇದು ಸರಿಯಲ್ಲ ಎಂದರು.

ಸಿಎಎಂಪಿಎಗೆ ಸೇರಿದ 25,000 ಕೋಟಿ ರೂಪಾಯಿ ದೇಶದ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮೂಲಧನವಾಗಿದ್ದು, ಇದನ್ನು ಸುಪ್ರೀಂಕೋರ್ಟ್ ನಿಯಮಗಳಿಗೆ ಅನುಸಾರವಾಗಿ ಅರಣ್ಯ ಅಭಿವೃದ್ಧಿ, ವನ್ಯಜೀವಿ ಸಂರಕ್ಷಣೆ ಇತರ ಪರಿಸರ ಸಂಬಂಧಿ ಯೋಜನೆಗಳಿಗಾಗಿ ಬಳಸಿಕೊಳ್ಳಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT