ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ಪ್ರದೇಶದಲ್ಲಿ ವಿಮಾನ ದುರಂತ: 28 ಮಂದಿ ಸಾವು

Last Updated 14 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಪೋರ್ಟ್ ಮೊರೆಸ್ಬಿ, (ಪಪುವಾ ನ್ಯೂಗಿನಿಯಾ),(ಎಪಿ): ಪಪುವಾ ನ್ಯೂಗಿನಿಯಾದ ಅರಣ್ಯ ಪ್ರದೇಶದಲ್ಲಿ ವಿಮಾನ ದುರಂತಕ್ಕೀಡಾಗಿ 28 ಜನರು ಮೃತಪಟ್ಟಿದ್ದಾರೆ ಎಂದು ಆಸ್ಟ್ರೇಲಿಯಾದ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನ ಪೈಲಟ್ ಸೇರಿ ನಾಲ್ವರು ಬದುಕುಳಿದಿದ್ದಾರೆ ಎಂದು ಆಸ್ಟ್ರೇಲಿಯಾದ ವಿದೇಶಾಂಗ ಮತ್ತು ವಾಣಿಜ್ಯ ಸಚಿವಾಲಯ ತಿಳಿಸಿದೆ.

`ಏರ್‌ಲೈನ್ಸ್ ಪಿಎನ್‌ಜಿ ಡ್ಯಾಶ್-8~ ಎಂಬ ವಿಮಾನವು ಗುರುವಾರ `ಲಿ~ಯಿಂದ ದಕ್ಷಿಣ ಫೆಸಿಫಿಕ್ ನಡುಗಡ್ಡೆ ರಾಷ್ಟ್ರಗಳ ಮೇಲಿಂದ `ಮದಂಗ್~ ಕಡೆ ಹಾರುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಅಪಘಾತ ಪತ್ತೆ ಆಯೋಗದ ವಕ್ತಾರರು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ. ಅಂಬುಲೆನ್ಸ್‌ಗಳೂ ತೆರಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT