ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಕಾವತಿ, ಹೇಮಾವತಿಗೆ ಜಯಲಲಿತಾ ತಗಾದೆ

Last Updated 4 ಸೆಪ್ಟೆಂಬರ್ 2013, 11:21 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಅರ್ಕಾವತಿ ಮತ್ತು ಹೇಮಾವತಿ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕರ್ನಾಟಕ ಸರ್ಕಾರಕ್ಕೆ ತಾಕೀತು ಮಾಡುವಂತೆ ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನದಿ ಪಾತ್ರದಲ್ಲಿ ಕರ್ನಾಟಕ ಸರ್ಕಾರ ನೀರಾವರಿ ಯೋಜನೆಗಳನ್ನು ಕೈಗೊಂಡರೆ ತಮಿಳುನಾಡಿನ ನೀರಾವರಿ ಯೋಜನೆಗಳಿಗೆ ತೊಂದರೆಯಾಗಲಿದೆ ಎಂದು ಆಕ್ಷೇಪಿಸಿ ಮಂಗಳವಾರ ಪತ್ರ ಬರೆದಿದ್ದಾರೆ. 

ತಾವು ಬರೆದ ಪತ್ರವನ್ನು ಬುಧವಾರ ಮಾಧ್ಯಮಗಳಿಗೆ ಬಿಡುಗಡೆ ಮಾಡಿ ಮಾತನಾಡಿದ ಜಯಲಲಿತಾ `ನೀರಾವರಿ ಯೋಜನೆಗಳು ಮತ್ತು ಮೇಕೆದಾಟು ಬಳಿ ಸ್ಥಾಪಿಸಲು ಉದ್ದೇಶಿಸಿರುವ ಜಲವಿದ್ಯುತ್ ಯೋಜನೆಯನ್ನು ಕೈಬಿಡಬೇಕು' ಎಂದು ಅವರು ಇದೇ ವೇಳೆ ಒತ್ತಾಯಿಸಿದರು.

ಕಾವೇರಿ ನಿರ್ವಹಣಾ ಮಂಡಳಿ ರಚನೆ ಆಗುವವರೆಗೂ ಕಾವೇರಿ ನದಿಪಾತ್ರದಲ್ಲಿ ಕರ್ನಾಟಕದ ಯಾವುದೇ ಯೋಜನೆಗಳಿಗೆ ಒಪ್ಪಿಗೆ ನೀಡದಂತೆ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆಯೂ ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT