ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ ಖೈದಾ ಪ್ರಮುಖ ನಾಯಕ ಶಹರಿ ಹತ್ಯೆ

Last Updated 16 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್, (ಪಿಟಿಐ): ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಪಾಕಿಸ್ತಾನದಲ್ಲಿಯ ಕಾರ್ಯಾಚರಣೆ ಮುಖ್ಯಸ್ಥ ಅಬು ಹಫ್ಸ್ ಅಲ್- ಶಹರಿಯನ್ನು ಪಾಕ್ ವಾಯವ್ಯ ಭಾಗದ ಬುಡಕಟ್ಟು ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮೂಲಕ, ಪಾಕ್‌ನ ಹಿಂಸಾಪೀಡಿತ ಬುಡಕಟ್ಟು ಪ್ರದೇಶದಲ್ಲಿ ಭಯೋತ್ಪಾದನೆ ವಿರುದ್ಧ ಸಮರಕ್ಕೆ ಎದುರಾಗಿದ್ದ ದೊಡ್ಡ ಕಂಟಕ ಪರಿಹಾರವಾದಂತಾಗಿದೆ ಎಂದು ಅಮೆರಿಕದ ಅಧಿಕಾರಿಗಳು ವ್ಯಾಖ್ಯಾನಿಸಿದ್ದಾರೆ.

ಈ ವಾರದ ಆರಂಭದಲ್ಲಿ ಶಹರಿಯನ್ನು ಹತ್ಯೆ ಮಾಡಲಾಗಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದು, ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ.

ಅಲ್‌ಖೈದಾ ದ್ವಿತೀಯ ನಾಯಕನಾಗಿದ್ದ ಅತಿಹಾನನ್ನು ಕಳೆದ ತಿಂಗಳು ಹತ್ಯೆ ಮಾಡಲಾಗಿತ್ತು. ಈಗ ಪಾಕಿಸ್ತಾನದಲ್ಲಿಯ ಕಾರ್ಯಾಚರಣೆಯ ಮುಖ್ಯಸ್ಥನನ್ನೇ ಹತ್ಯೆ ಮಾಡಿರುವುದರಿಂದ ಈ ಭಯೋತ್ಪಾದಕ ಸಂಘಟನೆಗೆ ಭಾರಿ ಹೊಡೆತ ಬಿದ್ದಿದೆ ಎಂಬುದು ಅಧಿಕಾರಿಗಳ ಅಭಿಪ್ರಾಯವಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT