ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶ್ವಿನ್ ದಾಳಿಗೆ ಆಸ್ಟ್ರೇಲಿಯ ಸರ್ವಪತನ

Last Updated 23 ಫೆಬ್ರುವರಿ 2013, 7:56 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಚೆನ್ನೈನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ  ವಿರುದ್ಧದ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯದ 2ನೇ ದಿನವಾದ ಶನಿವಾರ ಅಶ್ವಿನ್ ಅವರ ಮಾರಕ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತನ್ನ ಮೊದಲ ಇನಿಂಗ್ಸ್‌ನಲ್ಲಿ 380 ರನ್ ಗಳಿಗೆ ಪತನಗೊಂಡಿದೆ.

ಶುಕ್ರವಾರ 7 ವಿಕೆಟ್ ಕಳೆದುಕೊಂಡು 316ರನ್ ಗಳಿಸಿದ್ದ ಆಸ್ಟ್ರೇಲಿಯಾ ಇಂದು ಕೇವಲ 64 ರನ್ ಗಳಿಸುವಷ್ಟರಲ್ಲಿ ಇನ್ನುಳಿದ 3 ವಿಕೆಟ್ ಗಳನ್ನೂ ಕಳೆದುಕೊಂಡಿತು.

ತವರು ನೆಲದಲ್ಲಿ ಮೊದಲ ಟೆಸ್ಟ್ ಆಡುತ್ತಿರುವ ಅಶ್ವಿನ್ ಮತ್ತೆ ಇಂದು ಒಂದು ವಿಕೆಟ್ ಪಡೆದು ಆಸ್ಟ್ರೇಲಿಯಾದ ಪತನಕ್ಕೆ ಕಾರಣರಾದರು. ಒಟ್ಟಾರೆ ಅವರು 42 ಓವರ್‌ನಲ್ಲಿ 103 ರನ್ ನೀಡಿ 7 ವಿಕೆಟ್ ಪಡೆದರು. ಉಳಿದಂತೆ ರವೀಂದ್ರ ಜಡೇಜಾ 2 ಹಾಗೂ ಹರಭಜನಸಿಂಗ್ ಒಂದು ವಿಕೆಟ್ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT