ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂನಲ್ಲಿ ಸ್ಫೋಟ: ಇಬ್ಬರಿಗೆ ಗಾಯ

Last Updated 14 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಗುವಾಹಟಿ, (ಐಎಎನ್‌ಎಸ್): ಪ್ರಬಲ ಸ್ಫೋಟದಿಂದ ಇಬ್ಬರು ಗಾಯಗೊಂಡ ಘಟನೆ ಅಸ್ಸಾಂನ ಲಖಿಂಪುರ ಜಿಲ್ಲೆಯ ಸರ್‌ಮೋತಿ ಎಂಬಲ್ಲಿ ಶುಕ್ರವಾರ ನಡೆದಿದೆ.

ಗ್ರಾಮದ ಮನೆಯೊಂದರ ಕಾಂಪೌಂಡಿನಲ್ಲಿ ಬೆಳಿಗ್ಗೆ 8.30ರ ಸುಮಾರಿಗೆ ಈ ಬಾಂಬ್ ಸ್ಫೋಟಿಸಿದೆ.
`ಇದೊಂದು ಸುಧಾರಿತ ಸ್ಫೋಟಕ ಸಾಧನ (ಐಇಡಿ) ವಾಗಿದೆ. ಘಟನಾ ಸ್ಥಳದಲ್ಲಿ ಹೆಚ್ಚು ಜನರಿರಲಿಲ್ಲ. ಹೀಗಾಗಿ ಹೆಚ್ಚಿನ ಅನಾಹುತ ತಪ್ಪಿದೆ~ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

`ಚಿಂದಿ ಆಯುವ ಬಾಲಕನೊಬ್ಬ ಮಾರುಕಟ್ಟೆ ಪ್ರದೇಶದಲ್ಲಿದ್ದ ಈ ಐಇಡಿಯನ್ನು ಅರಿಯದೇ ತಂದು ತನ್ನ ಮನೆಯ ಹೊರಭಾಗದಲ್ಲಿ ಇಟ್ಟಿದ್ದ. ಜನದಟ್ಟಣೆ ವೇಳೆ ಸಿಡಿಯುವಂತೆ ಉಗ್ರರು ಸಮಯ ಅಳವಡಿಸಿದ್ದುದು  ತನಿಖೆಯಿಂದ ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT