ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಹಿಂದ ಮೂಲಕ ರಾಜಕೀಯಕ್ಕೆ ಹೊಸ ಸಂಚಲನ

Last Updated 29 ಜನವರಿ 2012, 19:30 IST
ಅಕ್ಷರ ಗಾತ್ರ

ಮೈಸೂರು: `ಅಹಿಂದ ಮೂಲಕ ರಾಜಕಾರಣಕ್ಕೆ ಹೊಸರೂಪ ಕೊಡಬೇಕು ಎಂಬ ಆಲೋಚನೆ ಇದೆ. ಬಹುಜನ ವಿದ್ಯಾರ್ಥಿ ಸಂಘದ ಎಲ್ಲರೂ ಇದಕ್ಕೆ ಬೆಂಬಲ ನೀಡಬೇಕು~ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್ ಮನವಿ ಮಾಡಿದರು.

ಬಹುಜನ ವಿದ್ಯಾರ್ಥಿ ಸಂಘದ ದಶಮಾನೋತ್ಸವದ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದವರನ್ನು ಎಲ್ಲ ಪಕ್ಷಗಳೂ ಮತ ಬ್ಯಾಂಕ್ ಆಗಿ ಬಳಸಿಕೊಂಡಿವೆ. ವಿಧಾನಸಭೆ ಮತ್ತು ಸಂಸತ್ತಿನಲ್ಲಿ ದಲಿತರ ಪರವಾಗಿ ದನಿ ಎತ್ತುವ ಸಚಿವರೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಅಹಿಂದ ಮೂಲಕ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಲು ತೀರ್ಮಾನಿಸಲಾಗಿದೆ~ ಎಂದು ಹೇಳಿದರು.

ನವದೆಹಲಿಯ ಇಗ್ನೋ ಅಂಬೇಡ್ಕರ್ ಅಧ್ಯಯನ ಕೇಂದ್ರದ ಮುಖ್ಯಸ್ಥೆ ಡಾ.ಗೇಲ್ ಆಮ್‌ವೆಡ್ಜ್ ಮಾತನಾಡಿ,  ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಸಮಾಜದಲ್ಲಿನ ಅಂಕಡೊಂಕು ತಿದ್ದಲು, ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಮುಂದಾಗಬೇಕು~ ಎಂದು ತಿಳಿಸಿದರು.

ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 15 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT