ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಗ್ಲ ಭಾಷೆ ಹಾವಳಿಯಿಂದ ಕನ್ನಡಕ್ಕೆ ಕುತ್ತು

Last Updated 25 ಫೆಬ್ರುವರಿ 2012, 19:45 IST
ಅಕ್ಷರ ಗಾತ್ರ

ಬೆಂಗಳೂರು: `ಆಂಗ್ಲ ಭಾಷೆಯ ಹಾವಳಿಯಿಂದ ಕನ್ನಡಕ್ಕೆ ಕುತ್ತು ಬಂದಿದ್ದು, ಇದನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ~ ಎಂದು  ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಸಿದ್ದಲಿಂಗಯ್ಯ ಹೇಳಿದ್ದಾರೆ.

ಶನಿವಾರ ನಗರದ ನಯನ ಸಭಾಂಗಣದಲ್ಲಿ ಕನ್ನಡ ಗಣಕ ಉಚಿತ ತರಬೇತಿ ಕೇಂದ್ರ ಏರ್ಪಡಿಸಿದ್ದ ಕನ್ನಡದಲ್ಲಿ ಗಣಕ ತರಬೇತಿ ಪಡೆದವರಿಗೆ ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡಿದ ಅವರು, `ರಾಜ್ಯದಲ್ಲಿ ಕನ್ನಡಕ್ಕಿಂತ ಇತರ ಭಾಷೆ ಮಾತನಾಡುವವರ ಸಂಖ್ಯೆ ಅಧಿಕವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಕನ್ನಡಕ್ಕೆ ಕುತ್ತು ಬಂದಿದೆ~ ಎಂದರು.

`ರಾಜ್ಯದ ನಿರುದ್ಯೊಗಿಗಳಿಗೆ ಉಚಿತ ಕನ್ನಡ ಗಣಕ  ತರಬೇತಿ ಕೇಂದ್ರ ಉಚಿತ ಗಣಕ ಯಂತ್ರದ ಬಗ್ಗೆ ತರಬೇತಿ ನೀಡುತ್ತಾ ಬಂದಿರುವ ಕಾರ್ಯ ಶ್ಲಾಘನಿಯ. ಸರ್ಕಾರ ಮಾಡುವ ಕೆಲಸವನ್ನು ಈ ತರಬೇತಿ ಕೇಂದ್ರ ಮಾಡುತ್ತಿದೆ.
ಇದರಿಂದಾಗಿ ರಾಜ್ಯದ 12 ಸಾವಿರ ಜನರಲ್ಲಿ 7 ಸಾವಿರ ತರಬೇತಿ ಪಡೆದು ಉತ್ತಮ ಉದ್ಯೋಗದಲ್ಲಿ ಇರುವುದು ಉತ್ತಮ ಬೆಳವಣಿಗೆ. ಸರ್ಕಾರ ಎಲ್ಲ ಸರ್ಕಾರಿ ಉದ್ಯೋಗಿಗಳಿಗೆ ಕಂಪ್ಯೂಟರ್ ಕಡ್ಡಾಯ ಮಾಡಿರುವುದು ತುಂಬಾ ಪ್ರಯೋಜನವಾಗಿದೆ. ಸರ್ಕಾರ ಆಧುನಿಕ ತಂತ್ರಜ್ಞಾನಗಳನ್ನು ಗ್ರಾಮೀಣ ಜನರಿಗೆ ತಲುಪಿಸುವ ಮೂಲಕ ಅವರ ಸ್ವಾವಲಂಬಿ ಬದುಕಿದೆ ನೆರವಾಗಬೇಕಿದೆ~ ಎಂದು ನುಡಿದರು.

`ಕನ್ನಡ ಗಣಕಯಂತ್ರ ಉಚಿತ ತರಬೇತಿ ಕೇಂದ್ರ~ದ ಅಧ್ಯಕ್ಷ ಎಸ್.ಎಲ್.ಗಂಗಾಧರಪ್ಪ ಮಾತನಾಡಿ, `ಸಮಾಜ ನಮಗೇನು ಮಾಡಿದೆ ಎನ್ನುವುದು ಮುಖ್ಯವಲ್ಲ. ಸಮಾಜಕ್ಕೆ ನಾವು ಏನು ಕೊಟ್ಟಿದ್ದೇವೆ ಎನ್ನುವುದು ಮುಖ್ಯ.

ಸಂಸ್ಥೆಗೆ ವರ್ಷಕ್ಕೆ 25 ಲಕ್ಷ ಖರ್ಚಾಗುತ್ತಿದ್ದು, ಇದರಲ್ಲಿ ಸರ್ಕಾರ ಕೇವಲ 3 ಲಕ್ಷ ಅನುದಾನವನ್ನು ನೀಡುತ್ತಿದೆ. ಸರ್ಕಾರ ಸಂಸ್ಥೆಗೆ ಹೆಚ್ಚಿನ ಅನುದಾನ ನೀಡಬೇಕು~  ಎಂದು ಅವರು ಮನವಿ ಮಾಡಿದರು.

ಸಮಾರಂಭದಲ್ಲಿ 480 ಜನರಿಗೆ ತರಬೇತಿಯ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್‌ನ ಅಧ್ಯಕ್ಷೆ ಗೀತಾಶ್ರೀ, ಸಂಜಯನಗರ ಲಯನ್ಸ್ ಕ್ಲಬ್ ಅಧ್ಯಕ್ಷೆ ಸರೋಜನಾಯ್ಡು, ಕೇಂದ್ರದ ಮುಖ್ಯಸ್ಥ ಆರ್.ಎ. ಪ್ರಸಾದ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT