ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಟೊ ಚಾಲಕರ ಪ್ರತಿಭಟನೆ

Last Updated 21 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆಟೊ ರಿಕ್ಷಾ ಚಾಲಕರ ಸಂಘಟನೆ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿತು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, `ಬಿಎಂಟಿಸಿಯ ಹೊಸ ಬಸ್ ಟರ್ಮಿನಲ್‌ಗಳಲ್ಲಿ ಆಟೊ ನಿಲ್ದಾಣಗಳನ್ನು ಆರಂಭಿಸಬೇಕು. ಮೀಟರ್ ದರವನ್ನು ಕನಿಷ್ಠ 20 ರೂ.ಗಳಿಗೆ ಹೆಚ್ಚಿಸಬೇಕು~ ಎಂದು ಒತ್ತಾಸಿದರು.

ನಂತರ ಬೆಂಗಳೂರು ನಗರ ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಇದೇ 28 ರಿಂದ ರಾಜ್ಯಾದ್ಯಂತ ಆಟೊ ಮುಷ್ಕರ ಆರಂಭಿಸುವುದಾಗಿ ಸಂಘಟನೆ ಎಚ್ಚರಿಸಿದೆ.
ಸಂಘಟನೆ ಅಧ್ಯಕ್ಷ ಮೀನಾಕ್ಷಿ ಸುಂದರಂ, ಆದರ್ಶ ಆಟೊ ಹಾಗೂ ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪಿ.ಸಂಪತ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT