ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತಂಕ ಮೂಡಿಸಿದ್ದ ಕರಡಿ ಸೆರೆ

Last Updated 18 ಜುಲೈ 2012, 4:45 IST
ಅಕ್ಷರ ಗಾತ್ರ

ಮಂಡ್ಯ: ನಾಗಮಂಗಲ ತಾಲ್ಲೂಕಿನ ಚಂದ್ರಶೇಖರಪುರ ಗ್ರಾಮ ಬಳಿ ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಮೂಡಿಸಿದ್ದ ಕರಡಿ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸೆರೆ ಹಿಡಿದಿದ್ದಾರೆ.

ಮುಂಜಾನೆ ಬಹಿರ್ದೆಸೆಗೆ ತೆರಳಿದ್ದ ಚಂದ್ರಶೇಖರ್ ಎಂಬಾತನಿಗೆ ಕರಡಿಗಳು ಕಾಣಿಸಿಕೊಂಡಿವೆ. ಭಯಭೀತನಾದ ಈತ ಗ್ರಾಮಕ್ಕೆ ಬಂದು ಜನರಿಗೆ ಸುದ್ದಿ ಮುಟ್ಟಿಸಿದ್ದಾನೆ. ನಂತರ, ಗುಂಪುಗೂಡಿ ಹೊಲದತ್ತ ಬಂದ ಜನರ ದಂಡು ಕಂಡ ಕರಡಿಗಳು ನಾಪತ್ತೆಯಾಗಿ, ಮತ್ತೊಂದು ಪ್ರದೇಶದಲ್ಲಿ ಕಾಣಿಸಿಕೊಂಡಿವೆ.

ಈ ಬಗೆಗೆ ಅರಣ್ಯ ಇಲಾಖೆ ಸಿಬ್ಬಂದಿಗೂ ಮಾಹಿತಿ ರವಾನಿಸಲಾಗಿದೆ. ತಕ್ಷಣ ಬೋನು, ಬಲೆಯೊಂದಿಗೆ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ.

ಬೋನಿನಲ್ಲಿ ಹಲಸಿನ ಹಣ್ಣು ಇಟ್ಟು ಕರಡಿಯನ್ನು ಆಕರ್ಷಿಸಲಾಯಿತು. ಹಣ್ಣಿನ ವಾಸನೆ ಹಿಡಿದು ಬಂದ ಕರಡಿ ಬೋನಿನೊಳಗೆ ಸೆರೆ ಬಿದ್ದಿದೆ.

ಬಲೆ ಬೀಸಿ ಸೆರೆ ಹಿಡಿಯುವ ವೇಳೆ ಕರಡಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸೂಕ್ತ ಚಿಕಿತ್ಸೆ ಕೊಡಿಸಿ ನಂತರ ಕಾಡಿಗೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದರು.

ವಲಯ ಅರಣ್ಯಾಧಿಕಾರಿ ರಮೇಶ್, ಸಿಬ್ಬಂದಿಗಳಾದ ಮಂಜು, ಗಿರಿಯಪ್ಪ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT