ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಆತುರದ ನಿರ್ಧಾರವಲ್ಲ'

ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆ
Last Updated 13 ಡಿಸೆಂಬರ್ 2012, 19:40 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾಯಿಸುವ `ಆಧಾರ್' ಆಧಾರಿತ ಯೋಜನೆಯನ್ನು ಆತುರಾತುರವಾಗಿ ಜಾರಿಗೊಳಿಸುತ್ತಿಲ್ಲ ಎಂದು ಸರ್ಕಾರ ಗುರುವಾರ ಸಮರ್ಥಿಸಿಕೊಂಡಿದೆ.

ಹಂತ ಹಂತವಾಗಿ ಜಾರಿಯಾಗಲಿರುವ ಈ ಕ್ರಮವು ಹಣ ಸೋರಿಕೆ, ವಿಳಂಬ, ನಕಲು ಮಾಡುವಿಕೆ, ಒಬ್ಬರ ಹೆಸರಿನಲ್ಲಿ ಮತ್ತೊಬ್ಬರು ಸವಲತ್ತು ಪಡೆಯುವುದು ಇತ್ಯಾದಿ ಸಮಸ್ಯೆಗಳನ್ನು ನಿವಾರಿಸುತ್ತದೆ ಎಂದು ಹಣಕಾಸು ಸಚಿವ ಪಿ.ಚಿದಂಬರಂ ರಾಜ್ಯಸಭೆಯಲ್ಲಿ ಹೇಳಿದರು.

ಬಿಜೆಪಿಯ ಪ್ರಕಾಶ್ ಜಾವಡೇಕರ್ ಅವರು ಕೇಳಿದ ಪ್ರಶ್ನೆಗೆ ಚಿದಂಬರಂ ಉತ್ತರ ನೀಡಿ, ಕೇಂದ್ರ/ ಕೇಂದ್ರ ಪ್ರಾಯೋಜಕತ್ವದ 34 ಕಾರ್ಯಕ್ರಮಗಳಿಗೆ ಅನ್ವಯವಾಗುವಂತೆ ಖಾತೆಗೆ ನೇರವಾಗಿ ಹಣ ವರ್ಗಾಯಿಸಲು ಸರ್ಕಾರ ನಿರ್ಧರಿಸಿದೆ; ಜನವರಿ 1ರಿಂದ ರಾಷ್ಟ್ರದ 43 ಜಿಲ್ಲೆಗಳಲ್ಲಿ ಹಂತಹಂತವಾಗಿ ಇದನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಈ ವ್ಯವಸ್ಥೆ ಜಾರಿಗೊಳಿಸಲು ಬೇಕಾದ ತಂತ್ರಜ್ಞಾನ ನಮ್ಮಲ್ಲಿದೆ. ಆರಂಭದಲ್ಲಿ ಕೆಲವು ಎಡರುತೊಡರುಗಳು ಎದುರಾಗಬಹುದು.

ಆದರೆ ಅವನ್ನೆಲ್ಲಾ ಆಗಿಂದಾಗ್ಗೇ ನಿವಾರಿಸಿಕೊಳ್ಳಲಾಗುವುದು. ಇದಕ್ಕೆ ಪೂರಕವಾಗಿ ಬ್ಯಾಂಕ್ ಮ್ಯಾನೇಜರುಗ ಮತ್ತಿತರ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT