ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಸಾಕ್ಷಿಗೆ ವಿರುದ್ಧ ನಡೆಯದ ಜತ್ತಿ

ಕೇಂದ್ರ ಸಚಿವ ವೀರಪ್ಪ ಮೊಯಿಲಿ ಪ್ರತಿಪಾದನೆ
Last Updated 15 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ‘ಅವಕಾಶವಾದಿ ರಾಜಕಾರಣದ ಇಂದಿನ ಸಂದರ್ಭದಲ್ಲಿ ಡಾ.ಬಿ.ಡಿ.ಜತ್ತಿ ಅವರ ರಾಜಕೀಯ ಜೀವನ ಎಲ್ಲರಿಗೂ ಆದರ್ಶಪ್ರಾಯ­ವಾಗಿದೆ’ ಎಂದು ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅಭಿಪ್ರಾಯ­ಪಟ್ಟರು.

ಡಾ.ಬಿ.ಡಿ.ಜತ್ತಿ ಅವರ 101ನೇ ಜನ್ಮದಿನೋತ್ಸವದ ಅಂಗವಾಗಿ ಬಸವ ಸಮಿತಿಯು ಶನಿವಾರ ನಗರದಲ್ಲಿ ಆಯೋಜಿಸಿದ್ದ ‘ಬಸವ ಸಮಿತಿ ಸಂಸ್ಥಾಪಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರರು.

ಡಾ.ಬಿ.ಡಿ.ಜತ್ತಿ ಅವರು ಗಾಂಧೀಜಿ ಮತ್ತು ಬಸವಣ್ಣನವರ ತತ್ವಗಳನ್ನು ತಮ್ಮ ರಾಜಕೀಯ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದರೆ ದೇಶದ ಅತ್ಯುನ್ನತ ಹುದ್ದೆಯಲ್ಲಿ ಹೆಚ್ಚು ಕಾಲ ಇರುವ ಅವಕಾಶ ಅವರಿಗಿತ್ತು. ಆದರೆ, ಅವರು ಎಂದೂ ತಮ್ಮ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೀಳುಮಟ್ಟದ ರಾಜಕಾರಣಕ್ಕೆ ಮುಂದಾಗಲಿಲ್ಲ ಎಂದು ಶ್ಲಾಘಿಸಿದರು.

ಬಸವಣ್ಣನವರ ತತ್ವಗಳನ್ನು ಇಡೀ ವಿಶ್ವಕ್ಕೆ ಸಾರುವ ರಾಷ್ಟ್ರಮಟ್ಟದ ವಿಶ್ವವಿದ್ಯಾಲಯವೊಂದು ಸ್ಥಾಪನೆಯಾಗಬೇಕೆಂಬುದು ಅವರ ಉದ್ದೇಶ­ವಾಗಿತ್ತು. ಅದನ್ನು ಈಡೇರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿ, ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಲಿಂಗಸಮಾನತೆಗಳನ್ನು ತರಲು ಶ್ರಮಿಸಿದ ಶರಣ ಬಸವಣ್ಣನವರ ತತ್ವ, ಚಿಂತನೆಗಳನ್ನು ವಿಶ್ವದಾದ್ಯಂತ ಪ್ರಚಾರಪಡಿಸಬೇಕು ಎಂದು ಹೇಳಿದರು.

ಬಸವ ಮಾರ್ಗ ಪತ್ರಿಕೆಯ ಸಂಪಾದಕ ಡಾ.ಪ್ರಭಾಶಂಕರ ಪ್ರೇಮಿ ಮಾತನಾಡಿ, ಬಸವಾದಿ ಶರಣರ ತತ್ವಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವುದು ಡಾ.ಬಿ.ಡಿ.ಜತ್ತಿ ಅವರ ಬಹುದೊಡ್ಡ ಕನಸಾಗಿತ್ತು. ಹಾಗಾಗಿ ಬಸವ ಸಮಿತಿಯನ್ನು ಸ್ಥಾಪಿಸಿದರು. ಸಮಿತಿಯ ಮೂಲಕ ಎಲ್ಲ  ಭಾಷೆಗಳಲ್ಲಿ ಶರಣರ ತತ್ವಗಳನ್ನು  ಪ್ರಕಟಿಸಲು ಕ್ರಮ ಕೈಗೊಂಡಿದ್ದರು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT