ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಾಹುತಿ: ಕಾಲೇಜಿನ ಮುಖ್ಯಸ್ಥೆ ಬೆದರಿಕೆ

Last Updated 14 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕಾನ್ಪುರ (ಪಿಟಿಐ):  ತಾಯಿಯ ಸಾವಿಗೆ ಕಾರಣವಾಗಿರುವ ಆಸ್ಪತ್ರೆ ಸಿಬ್ಬಂದಿಗೆ ಶಿಕ್ಷೆ ನೀಡದಿದ್ದರೆ ತಾನೇ ಕುತ್ತಿಗೆ ಕೊಯ್ದುಕೊಂಡು ಆತ್ಮಾಹುತಿ ಮಾಡಿಕೊಳ್ಳುವುದಾಗಿ ಕಾಲೇಜು ಪ್ರಾಂಶುಪಾಲರೊಬ್ಬರು ಕೇಂದ್ರ ಸಚಿವರು ಭಾಗವಹಿಸಿದ್ದ ವಿಚಾರ ಸಂಕಿರಣದಲ್ಲಿ ಬೆದರಿಕೆ ಹಾಕಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಇಲ್ಲಿನ ಡಿಜಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿರುವ ಮೀಟಾ ಜಮಾಲ್ ಅವರು ಕೇಂದ್ರ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಎದುರು ಈ ರೀತಿಯ ಬೆದರಿಕೆ ಒಡ್ಡಿದ್ದಾರೆ.  ಮೀಟಾ ಅವರ ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಅವರು ಕೆಲವು ದಿನಗಳ ಹಿಂದೆ ಮೃತಪಟ್ಟಿದ್ದು, ತಾಯಿಯ ಸಾವಿಗೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಮೀಟಾ ಆಸ್ಪತ್ರೆ ಸಿಬ್ಬಂದಿ ವಿರುದ್ಧ ದೂರು ನೀಡಿದ್ದರು. ಆದರೆ ಆರೋಪಿಗಳ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಈ ರೀತಿ ಬೆದರಿಕೆ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT