ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಾಯ ವಿನಾಯ್ತಿ ಮಿತಿ ಏರಿಕೆ

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲ
Last Updated 21 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ಪಡೆಯಲು ನಿಗದಿಪಡಿಸಿದ್ದ ಆದಾಯದ ಮಿತಿಯನ್ನು ಪರಿಷ್ಕರಿಸಲಾಗಿದೆ. ಶೈಕ್ಷಣಿಕ ಪ್ರವೇಶ, ತರಬೇತಿ, ಶಿಷ್ಯವೇತನ, ಶುಲ್ಕ ವಿನಾಯಿತಿ ಮತ್ತಿತರ ಸೌಲಭ್ಯಗಳಿಗೆ ಈ ಮಿತಿ ಅನ್ವಯವಾಗಲಿದೆ.

ಪ್ರವರ್ಗ 1ರ ವಿದ್ಯಾರ್ಥಿಗಳು ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಪಡೆಯಲು ಹಿಂದೆ ರೂ. 2 ಲಕ್ಷ ಆದಾಯ ಮಿತಿ ಇತ್ತು. ಅದನ್ನು ರೂ. 2.5 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇತರ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ಇದ್ದ ಆದಾಯ ಮಿತಿಯನ್ನು ರೂ. 44,500ರಿಂದ ರೂ. 1 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಅವರು ಶನಿವಾರ ವಿಧಾನಸೌಧದಲ್ಲಿ ಪತ್ರಕರ್ತರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT