ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದ್ಯತೆಗೆ ಮೊಯಿಲಿ ಮನವಿ

Last Updated 21 ಜನವರಿ 2011, 8:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ವ್ಯಾಪ್ತಿಯ ಅಪೂರ್ಣ ಯೋಜನೆಗಳನ್ನು ಪ್ರಸಕ್ತ ರೈಲ್ವೆ ಬಜೆಟ್‌ನಲ್ಲಿ ಪೂರ್ಣಗೊಳಿಸು ವಂತೆ ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರಿಗೆ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪಮೊಯಿಲಿ ಮನವಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ- ಗೌರಿಬಿದನೂರು, ಚಿಕ್ಕಬಳ್ಳಾಪುರ- ಬಾಗೆಪಲ್ಲಿ ಮತ್ತು ಪುಟ್ಟಪರ್ತಿ ನಡುವೆ ಹೊಸ ರೈಲ್ವೆ ಮಾರ್ಗ ಅಳವಡಿಸುವ ನಿಟ್ಟಿನಲ್ಲಿ ಕಳೆದ ಬಜೆಟ್‌ನಲ್ಲಿ ಸರ್ವೆ ಕಾರ್ಯ ಕೈಗೊಳ್ಳಲಾಗಿತ್ತು. ಈಗ ಸರ್ವೆ ಕಾರ್ಯ ಮುಗಿದಿದ್ದು, ಹೊಸ ಬಜೆಟ್‌ನಲ್ಲಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆದ್ಯತೆ ನೀಡಬೇಕು ಎಂದು ಅವರು ಅವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಮತ್ತು ಕೋಲಾರ ನಡುವೆ ಗೇಜ್ ಪರಿರ್ತನೆ ಕಾರ್ಯ ನಿಂತು ಹೋಗಿದ್ದು, ಈ ಕಾಮಗಾರಿ ಆರಂಭಕ್ಕೆ ಚಾಲನೆ ನೀಡಬೇಕು. ಚಿಕ್ಕಬಳ್ಳಾಪುರ, ಗೌರಿಬಿದನೂರು, ಯಲಹಂಕ, ದೊಡ್ಡಬಳ್ಳಾಪುರ, ದೇವನಹಳ್ಳಿ ಈ 5 ಸ್ಥಳಗಳಲ್ಲಿ ಈಗಿರುವ ರೈಲ್ವೆ  ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಬೇಕು. ಮಾದರಿ ರೈಲ್ವೆ  ನಿಲ್ದಾಣ ಮಾಡುವ ಬಗ್ಗೆ ಕಳೆದ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿತ್ತು. ಆದರೆ ಈ ಕಾಮಗಾರಿಗಳನ್ನು ತಡೆ ಹಿಡಿಯಲಾಗಿದ್ದು, ನೂತನ ಬಜೆಟ್‌ನಲ್ಲಿ ಅವಕಾಶ ನೀಡಬೇಕು ಎಂದು ಅವರು ಕೋರಿದ್ದಾರೆ.

ಗೌರಿಬಿದನೂರಿನ ಮೂಲಕ ಹಾದು ಹೋಗುವ ಕೊಯಂಮತ್ತೂರು ಕುರ್ಲಾ ಎಕ್ಸ್‌ಪ್ರೆಸ್, ಕರ್ನಾಟಕದ ಎಕ್ಸ್‌ಪ್ರೆಸ್, ಯಶವಂತಪುರ-ಶಿರಡಿ ಎಕ್ಸ್‌ಪ್ರೆಸ್ ಮತ್ತು ಯಶವಂತಪುರ ಮಚಲಿಪಟ್ಟಣಂ ರೈಲುಗಳನ್ನು ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಮಾಡಿಕೊಡಬೇಕು. ಬೆಂಗಳೂರು ಗುಂತಕಲ್ ರೈಲ್ವೆ ಮಾರ್ಗವನ್ನು ವಿದ್ಯುತ್ತೀಕರಣ ಗೊಳಿಸಬೇಕು. ದ್ವಿಪಥ ಮಾರ್ಗವಾಗಿ ಪರಿವರ್ತಿಸಬೇಕು. ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ಅಂಡರ್‌ಪಾಸ್ ನಿರ್ಮಾಣ ಮಾಡಬೇಕು. ಈ ಕಾಮಗಾರಿಗಳನ್ನು ಹೊಸ ಬಜೆಟ್‌ನಲ್ಲಿ ಸೇರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT