ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನಂದಿ ಬೆನ್ ಗುಜರಾತ್ ಮುಖ್ಯಮಂತ್ರಿ

Last Updated 21 ಮೇ 2014, 14:29 IST
ಅಕ್ಷರ ಗಾತ್ರ

ಗಾಂಧಿನಗರ (ಪಿಟಿಐ): ಗುಜರಾತ್ ಸರ್ಕಾರದ ಹಿರಿಯ ಸಚಿವೆ ಆನಂದಿ ಬೆನ್ ಪಟೇಲ್ ಅವರು ಬುಧವಾರ ಅವಿರೋಧವಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.  ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯೆಂಬ ಹೆಗ್ಗಳಿಕೆ ಇವರದಾಗಿದೆ.

ಈ ಮೂಲಕ ಕಳೆದ 12 ವರ್ಷಗಳ ಕಾಲ ಹತ್ತು ಹಲವು ವಿವಾದಗಳ ಮಧ್ಯ ಗುಜರಾತ್‌ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ನರೇಂದ್ರ ಮೋದಿ ಅವರ ಆಡಳಿತ ಅಂತ್ಯಗೊಂಡಿದೆ.

ರಾಜ್ಯ ಕಂದಾಯ ಮಂತ್ರಿಯಾಗಿರುವ 73 ವಯಸ್ಸಿನ ಆನಂದಿ ಅವರು ಮೋದಿ ಅವರ ಆಪ್ತರಲ್ಲಿ ಒಬ್ಬರಾಗಿದ್ದಾರೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ಕೃಷಿ ಸಚಿವ ಭೂಪೇಂದ್ರ ಸಿಂಹ ಅವರು ಆನಂದಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ ಸದಸ್ಯರೆಲ್ಲ ಒಕ್ಕೊರಲಿನಿಂದ ಸಮ್ಮತಿ ಸೂಚಿಸಿದರು.

ಪಕ್ಷ ವೀಕ್ಷಕ­ರಾಗಿ ಆಗಮಿಸಿದ್ದ ಹಿರಿಯ ನಾಯಕ ತಾವರ್‌ಚಂದ್‌ ಗೆಹ್ಲೋಟ್‌ ಅವರು ಆನಂದಿ ಅವರ ಆಯ್ಕೆಯನ್ನು ಸಭೆಯಲ್ಲಿ ಘೋಷಿಸಿದರು. 

ಗುಜರಾತ್‍ನ 15ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಆನಂದಿ ಅವರ ಪ್ರಮಾಣ ವಚನ ಕಾರ್ಯಕ್ರಮವು ಗುರುವಾರ ಮೋದಿ ಅವರ ಉಪಸ್ಥಿತಿಯಲ್ಲಿ ಗಾಂಧಿ­ನಗರದ ಮಹಾತ್ಮ ಮಂದಿರದಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT